ಬೆಂಗಳೂರು :
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಗರಣವೊಂದರಲ್ಲಿ ತೊಡಗಿಕೊಂಡಿರುವ ಆರೋಪ ಕೇಳಿಬಂದಿದ್ದು, ಅವರೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸ್ಪಷ್ಟ ಸೂಚನೆ ನೀಡಿದೆ ಎನ್ನಲಾಗಿದೆ.
ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಇದೀಗ ಕಪ್ಪು ದಂಧೆಯಲ್ಲಿ ತೊಡಗಿಕೊಂಡ ಆರೋಪ ಕೇಳಿ ಬಂದಿದೆ.
ಚಿನ್ನದ ಗಟ್ಟಿ ಹಾಗೂ ಹಣ ಎಕ್ಸ್‍ಚೇಂಜ್ ಆರೋಪದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಜೊತೆ ಅಂತರ ಕಾಯ್ದುಕೊಳ್ಳಲು ಬಿಜೆಪಿ ಹೈಕಮಾಂಡ್ ನಿರ್ದೇಶನ ನೀಡಿದೆ ಎನ್ನುವ ಮಾಹಿತಿ ಬಿಜೆಪಿ ಆಪ್ತ ಮೂಲಗಳಿಂದ ತಿಳಿದು ಬಂದಿದೆ. ರೆಡ್ಡಿ ಜೊತೆ ಆಪ್ತತೆ ಹೊಂದಿದ ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ಈ ಖಡಕ್ ಸೂಚನೆ ನೀಡಿದೆ.
ಬಳ್ಳಾರಿಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಇದು ಇನ್ನಷ್ಟು ಸಂಕಷ್ಟ ತಂದೊಡ್ಡುತ್ತದೆ. ಹೀಗಾಗಿ ಜನಾರ್ದನ ರೆಡ್ಡಿ ಸಂಪರ್ಕ ಮಾಡಬೇಡಿ. ಯಾರೂ ಈ ವಿಚಾರ ಮಾತನಾಡಬೇಡಿ. ಅನಗತ್ಯವಾಗಿ ಈ ವಿಚಾರದ ಬಗ್ಗೆ ಮಾತನಾಡಿ ಗೊಂದಲ ಸೃಷ್ಟಿಸಬೇಡಿ ಎಂದು ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
