ವಿಧಾನಸಭಾ ಚುನಾವಣೆ : ಬಿಜೆಪಿಯಿಂದ ಭರದ ಸಿದ್ದತೆ…!

ಬೆಂಗಳೂರು

     ವಿಧಾನಸಭಾ ಚುನಾವಣೆಗೆ ಭರದ ಸಿದ್ದತೆ ನಡೆಸುತ್ತಿರುವ ಬಿಜೆಪಿ ವರಿಷ್ಟರು ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರಚಾರ ಸಮಿತಿ ಮತ್ತು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯನ್ನು ರಚಿಸಿದ್ದಾರೆ.

    ಆದರೆ ಅಸಸಮಾಧಾನದಿಂದ ಕುದಿಯುತ್ತಿರುವ ಹಿರಿಯ ನಾಯಕ,ವಸತಿ ಸಚಿವ ವಿ.ಸೋಮಣ್ಣ ಸೇರಿದಂತೆ ಕೆಲ ಪ್ರಮುಖ ನಾಯಕರನ್ನು ಈ ತಂಡಗಳಿAದ ಹೊರಗಿಟ್ಟಿದ್ದು ಇದು ಕಮಲ ಪಾಳೆಯದಲ್ಲಿ ಮತ್ತಷ್ಟು ಅಂತ:ಕಲಹವನ್ನು ಸೃಷ್ಟಿಸಿದೆ.

    ಅಂದ ಹಾಗೆ ಪ್ರಚಾರ ಸಮಿತಿಯ ಸಾರಥ್ಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಹಿಸಲಾಗುತ್ತದೆ ಎಂಬ ವದಂತಿಗಳಿದ್ದರೂ ಅವೆಲ್ಲ ಸುಳ್ಳಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇಪ್ಪತ್ತೆಂಟು ಮಂದಿಯ ತಂಡವನ್ನು ಹೊಂದಿರುವ ಪ್ರಚಾರ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರುಗಳು ಸದಸ್ಯರಾಗಿದ್ದಾರೆ.

    ಕೇಂದ್ರ ಸಚಿವರುಗಳಾದ ಪ್ರಲ್ಹಾದ ಜೋ,ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ. ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಹಿರಿಯ ನಾಯಕರಾದ ಕೆ.ಎಸ್.ಈಶ್ವರಪ್ಪ ಅವರು ತಂಡದಲ್ಲಿದ್ದಾರೆ. ಸಚಿವರುಗಳಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಆರ್.ಅಶೋಕ್, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ಪ್ರಭು ಚೌಹಾಣ್, ಸಿ.ಎನ್.ಅಶ್ವಥ್ಥನಾರಾಯಣ್ ಅವರು ತಂಡದಲ್ಲಿದ್ದಾರೆ

     ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರದ ಮಾಜಿ ಸಚಿವರಾದ ವಿ.ಶ್ರೀನಿವಾಸ ಪ್ರಸಾದ್, ಸಂಸದ ಪಿ.ಸಿ.ಮೋಹನ್,ಮಾಜಿ ಸಚಿವರುಗಳಾದ ಅರವಿಂದ ಲಿಂಬಾವಳಿ, ಲಕ್ಷ÷್ಮಣ ಸವದಿ, ರಮೇಶ್ ಜಾರಕಿಹೊಳಿ ಯಡಿಯೂರಪ್ಪ ಅವರ ಪುತ್ರ, ಪಕ್ಷದ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಅವರುಗಳು ಪ್ರಚಾರ ಸಮಿತಿಯಲ್ಲಿ ಇದ್ದಾರೆ.

     ಈ ಮಧ್ಯೆ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದ್ದು, ಕೇಂದ್ರ ಸಚಿವರಾದ ಭಗವಂತ ಖೂಬಾ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

    ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ವಿಧಾನಪರಿಷತ್ತಿನ ಮಾಜಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪುರೆ,ಪಕ್ಷದ ಉಪಾಧ್ಕಕ್ಷರಾದ ನಿರ್ಮಲ ಕುಮಾರ್ ಸುರಾನಾ. ತೇಜಸ್ವಿನಿ ಅನಂತಕುಮಾರ್,ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ಧರಾಜು, ಪ್ರಧಾನ ಕಾರ್ಯದರ್ಶಿ ಅಶ್ವಥ್ಥನಾರಾಯಣ,ಮಹೇಶ್ ಟೆಂಗಿನಕಾಯಿ, ಪಕ್ಷದ ಕಾರ್ಯದರ್ಶಿ ಎಸ್.ಕೇಶವ ಪ್ರಸಾದ್, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮತ್ತು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಗೀತಾ ವಿವೇಕಾನಂದ ಅವರುಗಳು ನಿರ್ವಹಣಾ ಸಮಿತಿಯ ಸದಸ್ಯರಾಗಿ ನೇಮಿತರಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap