ಭಾರತ್ ಜೋಡೊ ಯಾತ್ರೆಯ ಯಶಸ್ಸು ಬಿಜೆಪಿ ನಿದ್ದೆಗೆಡಿಸಿದೆ : ಸಿದ್ದರಾಮಯ್ಯ

ಬೆಂಗಳೂರು: 

        ದೆಹಲಿ ಪೊಲೀಸರು ಭಾನುವಾರವೂ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರ ಮನೆಗೆ ಹೋಗಿದ್ದಾರೆ ಇದರ ಮರ್ಮ ಏನು  ಈ ವಿಚಾರವಾಗಿ ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

        ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಭಾರತ್ ಜೋಡೊ ಯಾತ್ರೆಯ ಯಶಸ್ಸು  ಆಡಳಿತಾರೂಢ ಬಿಜೆಪಿ ಪಕ್ಷದ ನಿದ್ದೆಗೆಡಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪ್ರಿಯತೆ ಅವರಲ್ಲಿ ಅಸೂಯೆ ಹುಟ್ಟಿಸಿದೆ. ಇವರಿಗೆಲ್ಲ ನನ್ನ ಸಂತಾಪಗಳು. ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ’ ಎಂದಿದ್ದಾರೆ.

        ಉದ್ಯಮಿ ಅದಾನಿ ಹಗರಣಗಳ ಬಗ್ಗೆ ದನಿ ಎತ್ತಿದ ದಿನದಿಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಹುಲ್ ಗಾಂಧಿ ಅವರ ಬೆನ್ನು ಹತ್ತಿದೆ ಎಂದರೆ ಆರೋಪದಲ್ಲಿ ಸತ್ಯ ಇದೆ ಎಂದರ್ಥ ಅಲ್ಲವೇ?  ಕಳ್ಳರ ಮನಸ್ಸು ಹುಳ್ಳಗೆ. ಬಿಜೆಪಿಗೆ ಮಹಿಳೆಯರ ಬಗ್ಗೆ ಅಷ್ಟೊಂದು ಕಾಳಜಿ-ಗೌರವ ಇರುವುದಾಗಿದ್ದರೆ ಮೊದಲು ತಮ್ಮ ಪಕ್ಷದಲ್ಲಿ ಮಹಿಳಾ ಪೀಡನೆಯ ಆರೋಪ ಹೊತ್ತಿರುವವರ ಬಗ್ಗೆ ತನಿಖೆ ನಡೆಸಲು‌ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಿ. ಆರೋಪಿಗಳ ಪಟ್ಟಿ ಉದ್ದ ಇದೆ ಎಂದಿದ್ದಾರೆ. 

       ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ ನರೇಂದ್ರ ಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ. ಕಾಶ್ಮೀರದಲ್ಲಿ ಮಹಿಳೆಯರೆಲ್ಲರೂ ಸುರಕ್ಷಿತರಾಗಿದ್ದಾರೆಯೇ?. ಅವರ ಮೇಲೆ ಯಾವುದೇ ದೌರ್ಜನ್ಯಗಳು ನಡೆಯುತ್ತಿಲ್ಲವೇ?. ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸುವ ಬದಲಿಗೆ ದೂರುದಾರರ ಬೆನ್ನು ಹತ್ತಿರುವ ಸರ್ಕಾರದ ದುರುದ್ದೇಶ ಅರ್ಥವಾಗದಷ್ಟು ದೇಶದ ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

     ‘ಭಾರತ್‌ ಜೋಡೊ ಯಾತ್ರೆ’ಯ ಸಮಾರೋಪ ಕಾರ್ಯಕ್ರಮದ ಭಾಷಣದಲ್ಲಿ ರಾಹುಲ್‌ ಹೇಳಿದ ವಿಚಾರಕ್ಕೆ ಸಂಬಂಧಿಸಿ ಅವರಿಗೆ ನೋಟಿಸ್‌ ನೀಡಲಾಗಿದೆ. ದೆಹಲಿ ಪೊಲೀಸರು ರಾಹುಲ್ ಗಾಂಧಿ ಅವರ ಮನೆಗೆ ಭೇಟಿ ನೀಡಿರುವುದು ಮೂರನೇ ಬಾರಿಯಾಗಿದೆ. ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ರಾಹುಲ್‌ ಗಾಂಧಿ ಅವರಲ್ಲಿ ಹೇಳಿಕೊಂಡ ಮಹಿಳೆಯರ ವಿವರಗಳನ್ನು ಸಂಗ್ರಹಿಸುವುದಕ್ಕಾಗಿ ಪೊಲೀಸರು ರಾಹುಲ್‌ ಅವರನ್ನು ಭೇಟಿಯಾಗಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link