ಸಿದ್ದರಾಮನಹುಂಡಿ:
ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ನಡೆದಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಗಲಭೆ ಪ್ರಕರಣದ ಬಗ್ಗೆ ಸ್ಪಷ್ಠನೆ ನೀಡಿರುವ ಯತೀಂದ್ರ ಸಿದ್ದರಾಮಯ್ಯ ಕಾರು-ದ್ವಿ ಚಕ್ರ ಅಪಘಾತವಾದ ಬಳಿಕ ಅಲ್ಲಿ ಜಗಳ ನಡೆದಿದೆ, ಆದರೆ ಬಿಜೆಪಿ ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ವಿ ಸೋಮಣ್ಣ ಮತ್ತು ಪ್ರತಾಪ್ ಸಿಂಹ ಮತಯಾಚನೆಗೆಂದು ತೆರಳಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಲ್ಲದೆ , ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಘಟನೆ ಬಳಿಕ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ಸಾಕಷ್ಟು ಟೀಕೆ ಮಾಡಿದ್ದರು.
ಘಟನೆ ವಿವಾದ ರೂಪ ಪಡೆದುಕೊಳ್ಳುವ ಸಂದರ್ಭದಲ್ಲೇ ಯತೀಂದ್ರ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದ್ದು ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕರು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, ಸಿದ್ದರಾಮಯಹುಂಡಿಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಬಳಿಕ ಜಗಳ ನಡೆದಿದೆ. ಇದಕ್ಕೆ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಕಿಡಿ ಕಾರಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
