ಗುಜರಾತ್‌ ಮಾದರಿಯ ಪ್ರಚಾರಕ್ಕೆ ಸಜ್ಜಾದ ಬಿಜೆಪಿ…!

ಬೆಂಗಳೂರು :

     ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗುಜರಾತ್ ಮಾದರಿಯಲ್ಲಿ ಚುನಾವಣಾ ಪ್ರಚಾರದ ಸುನಾಮಿ ಹರಿಸಲು ಬಿಜೆಪಿ ಹೈಕಮಾಂಡ್ ಸಜ್ಜಾಗಿದೆ. ಆಡಳಿತ ಪಕ್ಷ ವಿರೋಧಿ ಅಲೆ ಹತ್ತಿಕ್ಕಲು ಬಿಜೆಪಿ ವರಿಷ್ಠರು ಎಲ್ಲಾ ಜಾತಿ, ಜನಾಂಗದ ಪ್ರಮುಖರು, ಎಲ್ಲಾ ಭಾಷಿಕರನ್ನು ಸೆಳೆದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕಲು ಕಾರ್ಯತಂತ್ರ ರೂಪಿಸುತ್ತಿದೆ.

    ಗುಜರಾತ್ ಮಾದರಿಯಲ್ಲಿ ಎಲ್ಲಾ ರಾಜ್ಯಗಳ ನಾಯಕರನ್ನು ಪ್ರಚಾರ ಕಣಕ್ಕೆ ಇಳಿಸಲು ತೀರ್ಮಾನಿಸಿದೆ. ಕೇಂದ್ರ ಮತ್ತು ರಾಜ್ಯ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ವಿವಿಧ ರಾಜ್ಯಗಳ 50-60 ನಾಯಕರಿಗೆ ಕರ್ನಾಟಕ ಚುನಾವಣಾ ಪ್ರಚಾರದ ಉಸ್ತುವಾರಿಯನ್ನು ಪಕ್ಷ ವಹಿಸಿದೆ.

    ಬಿಜೆಪಿ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನಡುವೆ ಮೊದಲ ಸುತ್ತಿನ ಸಭೆ ನಡೆದಿದ್ದು, ಪಕ್ಷದ ಗೆಲುವಿಗೆ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗಿದೆ.

    ಕೇಂದ್ರ ಸಚಿವ ಪಂಕಜ್ ಚೌಧರಿ, ಸಂಸದ ನಿಶಿಕಾಂತ್ ದುಬೆ, ರಮೇಶ್ ಬಿಧುರಿ, ಸಂಜಯ್ ಭಾಟಿಯಾ, ಬಿಹಾರ ಶಾಸಕ ಸಂಜೀವ್ ಚೌರಾಸಿಯಾ, ಯುಪಿ ಶಾಸಕ ಸತೀಶ್ ದ್ವಿವೇದಿ ಮತ್ತು ಆಂಧ್ರ ಪ್ರದೇಶದ ನಾಯಕ ಪಿ ಸುಧಾಕರ್ ರೆಡ್ಡಿ ಅವರು ಹಲವು ಚುನಾವಣೆಗಳಲ್ಲಿ ಪ್ರಚಾರ ಮಾಡಿದ ಅನುಭವವನ್ನು ಹೊಂದಿದ್ದಾರೆ.

    ಪಕ್ಷವು 224 ವಿಧಾನಸಭಾ ಕ್ಷೇತ್ರಗಳ ಪೈಕಿ 115 ಕ್ಷೇತ್ರಗಳನ್ನು ಗುರುತಿಸಿದೆ. ಪ್ರತಿಯೊಬ್ಬ ನಾಯಕನಿಗೆ 2-3 ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಲಾಗಿದೆ ಮತ್ತು ಪಕ್ಷಕ್ಕೆ ನೆಲೆ ಇಲ್ಲದ ಕ್ಷೇತ್ರಗಳಲ್ಲಿ ಪಕ್ಷದ ಅವಕಾಶಗಳನ್ನು ಹೆಚ್ಚಿಸುವಂತೆ ಕೇಳಿಕೊಳ್ಳಲಾಗಿದೆ. ಗುಜರಾತ್ ವಿಧಾನಸಭೆ ಚುನಾವಣೆ ಸಮಯದಲ್ಲಿ, ಆಡಳಿತಾರೂಢ ಬಿಜೆಪಿ ಭಾರಿ ಜನಾದೇಶದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿತು. ಕೇಸರಿ ಪಕ್ಷವು ವಿವಿಧ ನಾಯಕರಿಗೆ ಪ್ರಮುಖ ಚುನಾವಣಾ ಜವಾಬ್ದಾರಿಗಳನ್ನು ವಹಿಸಿ, ಅಪೇಕ್ಷಿತ ಲಾಭಾಂಶವನ್ನು ಗಳಿಸಿತು.

    ಬಿಜೆಪಿ ಅಧಿಕಾರದಲ್ಲಿರುವ ದಕ್ಷಿಣದ ಏಕೈಕ ರಾಜ್ಯ ಕರ್ನಾಟಕವಾಗಿದೆ. ಪಕ್ಷವು ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಿತು. ಪ್ರಬಲ ಲಿಂಗಾಯತ ನಾಯಕರೆಂದೇ ಗುರುತಿಸಿಕೊಂಡಿರುವ ಹಿರಿಯ ಬಿಎಸ್ ಯಡಿಯೂರಪ್ಪ ಅವರ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಪ್ರಚಾರಕ್ಕೂ ಸಹ ಸಿದ್ಧತೆಗಳು ನಡೆದಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link