ಬಿಜೆಪಿ ನಾಯಕರನ್ನು ಬಿಜೆಪಿ ಕೆಟ್ಟದಾಗಿ ನಡೆಸಿಕೊಂಡಿದೆ : ಸಿದ್ದರಾಮಯ್ಯ

ಬೆಂಗಳೂರು

    ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷವು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ .ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿಗೆ ಕ್ಷೇತ್ರವಿಲ್ಲ ಎಂಬ ಈಶ್ವರಪ್ಪ ಹೇಳಿಕೆ ಕುರಿತು ವ್ಯಂಗ್ಯವಾಡಿದರು.

   ಈಗ ಅವರಿಗೂ (ಈಶ್ವರಪ್ಪ) ಕ್ಷೇತ್ರವಿಲ್ಲ. ಅವರನ್ನು ನೋಡಿದರೆ ಬೇಸರವಾಗುತ್ತಿದೆ. ರಾಜಕೀಯದಲ್ಲಿ ಅವರು ನನ್ನ ಪ್ರತಿಸ್ಪರ್ಧಿ… ಆದರೆ ಅವರು ತಮ್ಮ ಪಕ್ಷಕ್ಕಾಗಿ (ಬಿಜೆಪಿ) ಶ್ರಮಿಸಿದ್ದಾರೆ. ಬಿಜೆಪಿ ಅವರನ್ನು, ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಹೇಳಿದರು.

 
    ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ರದ್ದುಗೊಳಿಸಿದ್ದರ ಕುರಿತು ಪ್ರತಿಕ್ರಿಯಿಸಿ, ಸರ್ಕಾರ ಮಾಡಿದ್ದು ತಪ್ಪು, ಈ ವಿಚಾರ ಇದೀಗ ನ್ಯಾಯಾಲಯದ ಅಂಗಳದಲ್ಲಿದೆ. ಒಕ್ಕಲಿಗರು ಮತ್ತು ಲಿಂಗಾಯತರಿಗೆ ನೀಡಿರುವ ಮೀಸಲಾತಿಯನ್ನು ನಾವು ವಿರೋಧಿಸುವುದಿಲ್ಲ. ಆದರೆ, ಮುಸ್ಲಿಮರಿಗೆ ಮೀಸಲಾದ ಕೋಟಾವನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ