ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಮುಂದಾದ ಬಿಜೆಪಿ : ಆಪ್‌ ಆರೋಪ

ನವದೆಹಲಿ:

    ರಾಜಧಾನಿ ದೆಹಲಿಯ ವಿಧಾನಸಭೆಯಲ್ಲಿ ಕೇವಲ ಎಂಟು ಶಾಸಕರನ್ನು ಹೊಂದಿರುವ ಬಿಜೆಪಿ, ಅವಿಶ್ವಾಸ ನಿರ್ಣಯದ ನೆಪದಲ್ಲಿ ಶಾಸಕರಿಗೆ ಹಣ ನೀಡುವ ಮೂಲಕ ನಮ್ಮ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

     ಬಿಜೆಪಿ ನಮ್ಮ ಪಕ್ಷದ ಶಾಸಕರಿಗೆ ಎರಡು ಆಯ್ಕೆಗಳನ್ನು ನೀಡುತ್ತಿದೆ. ಒಂದು ಅವರು ಪಕ್ಷಕ್ಕೆ ಸೇರಬೇಕು ಅಥವಾ ಸಿಬಿಐ-ಇಡಿ ಅವರನ್ನು ಜೈಲಿಗೆ ಹಾಕುತ್ತದೆ ಎಂದು ಬೆದರಿಕೆ ಒಡ್ಡುತ್ತಿದ್ದಾರೆ’ ಎಂದು ಆರೋಪಿಸಿದರು .ದೆಹಲಿ ವಿಧಾನಸಭೆಯ ನಡೆಯುತ್ತಿರುವ ಅಧಿವೇಶನದಲ್ಲಿ ಕೇಜ್ರಿವಾಲ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಯೋಜಿಸುತ್ತಿದೆ.

    ದೆಹಲಿಯಲ್ಲಿ ಚುನಾವಣೆ ನಂತರ ಬಿಜೆಪಿ ಸೋಲುತ್ತಿದ್ದು, ಈಗ ನಮ್ಮ ಶಾಸಕರಿಗೆ ‘ನಿಮ್ಮ ಉಪಮುಖ್ಯಮಂತ್ರಿಗೆ ನಾವು ಆ ರೀತಿ ಮಾಡಿದ್ದೀವಿ. ಆದರೆ, ನೀವು ಬರೀ ಎಂಎಲ್ಎ ಅಷ್ಟೇ’ ಎಂದು ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿ ತನ್ನ ನೀಚ ಪ್ರಯತ್ನಗಳನ್ನು ನಿಲ್ಲಿಸಬೇಕು. ಅವರು ಅನೇಕ ಬಾರಿ ಪ್ರಯತ್ನಿಸಿದರು. ಆದರೆ, ನಮ್ಮ ಶಾಸಕರನ್ನು ಸೆಳೆಯಲು ಸಾಧ್ಯವಾಗಲಿಲ್ಲ’ ಎಂದು ಆರೋಪಿಸಿದ್ದಾರೆ.

ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಶುಕ್ರವಾರ ಆರಂಭವಾಗಿದೆ.

    ‘ಭ್ರಷ್ಟಾಚಾರ’ದಲ್ಲಿ ಭಾಗಿಯಾಗಿರುವ ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲಿದೆ ಎಂದು ವಿರೋಧ ಪಕ್ಷದ ನಾಯಕ ರಾಮವೀರ್ ಸಿಂಗ್ ಬಿಧುರಿ ಹೇಳಿದ್ದಾರೆ.2021-22ರ ಅವಧಿಯ ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಎಎಪಿ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂದು ಚಡ್ಡಾ ಬಿಜೆಪಿ ನೇತೃತ್ವದ ಕೇಂದ್ರವನ್ನು ಟೀಕಿಸಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap