ಮುಡಾ ಹಗರಣ : ಬಿಜೆಪಿಯ ಹಲವು ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು 

   ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ದ ಇಂದು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಕೆಂಗೇರಿಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು,ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

   ಮೈಸೂರು ಮುಡಾ ಹಗರಣದ ಪ್ರಕರಣ ಹಾಗೂ ರಾಜ್ಯದ ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಖಂಡಿಸಿ ಜುಲೈ 12ರ ಶುಕ್ರವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ನಿನ್ನೆಯೇ ಹೇಳಿತ್ತು. ಆದರೆ ಇಂದು ಮೈಸೂರಿಗೆ ಹೋಗುತ್ತಿದ್ದ ವೇಳೆಯೇ ಕೆಂಗೇರಿಯಲ್ಲಿ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

   ಮೈಸೂರಿನಲ್ಲಿ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹೋಗತುತಿದ್ದ ಬಿಜೆಪಿ ಕಾರ್ಯಕರ್ತರ ಬಸ್‌ ತಡೆದ ಪೊಲೀಸರು ಅವರನ್ನೂ ವಶಕ್ಕೆ ಪಡೆದುಕೊಂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link