ಕಾಂಗ್ರೆಸ್‌ ನಾಯಕರಿಗೆ ಅಸ್ತ್ರವಾದ ಬಿಜೆಪಿ ನಾಯಕರ ಎಡವಟ್ಟುಗಳು…!

ಬೆಂಗಳೂರು

     ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆಡಳಿತರೂಢ ಬಿಜೆಪಿಯಲ್ಲಿ ಆಗುತ್ತಿರುವ ಬದಲಾವಣೆಗಳು ಮತ್ತು ನಾಯಕರು ಮಾಡಿಕೊಳುತ್ತಿರುವ ಎಡವಟ್ಟುಗಳು, ಮುಖಂಡರಲ್ಲಿನ ಭಿನ್ನಾಭಿಪ್ರಾಯಗಳು ಎಲ್ಲೋ ಒಂದು ಕಡೆ ಕಾಂಗ್ರೆಸ್ ಮುಂದೆ ಮಂಡಿಯೂರುವಂತೆ ಮಾಡಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

     ಆರೋಪಗಳಿಗೆ ತಕ್ಕಂತೆ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಜನ ಬಿಜೆಪಿ ಬಗ್ಗೆ ತಾತ್ಸಾರ ತಾಳುವಂತೆ ಮಾಡಿದೆ.  ಈಗಾಗಲೇ ಚುನಾವಣಾ ಪ್ರಚಾರಗಳಲ್ಲಿ ಕಾಂಗ್ರೆಸ್ ಮುಖಂಡರು ಮುಂದೆ ನಮ್ಮದೇ ಸರ್ಕಾರ ಬರಲಿದ್ದು, ನಿಮ್ಮೆಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆಗಳನ್ನು ನೀಡುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

    ಇನ್ನು ಆಡಳಿರೂಢ ಬಿಜೆಪಿ ಜನಪ್ರಿಯ ಬಜೆಟ್ ಮಂಡಿಸಿದರೂ ಅದು ಜನರಿಗೆ ತಲುಪಿದಂತೆ ಕಾಣುತ್ತಿಲ್ಲ. ಬದಲಿಗೆ ಜನ ಕಾಂಗ್ರೆಸ್ ನೀಡಿರುವ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ 2000 ರೂ ಸಹಾಯಧನದ ಭರವಸೆಗಳನ್ನೇ ಮೆಚ್ಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿಕೊಳ್ಳುವಲ್ಲಿ ವಿಫಲವಾಗಿತ್ತು. ಆದರೆ ಈ ಬಾರಿ ಬಿಜೆಪಿಗಿಂತಲೂ ಚೆನ್ನಾಗಿ ಸೋಷಿಯಲ್ ಮೀಡಿಯಾವನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿರುವುದು ಎದ್ದು ಕಾಣಿಸುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link