ಕಾರೊಂದು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಏಳು ಮೆಡಿಕಲ್ ವಿದ್ಯಾರ್ಥಿಗಳು ಸಾವ ನ್ನಪ್ಪಿ ರುವ ಘಟನೆ ಜಿಲ್ಲೆಯ ಹೊರವಲಯದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ. ಮೃತ 7 ಮಂದಿ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳುದು ಬಂದಿದೆ.
ಅಪಘಾತದಲ್ಲಿ ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್ಡೇಲ್ ಅವರ ಪುತ್ರ ಆವಿಷ್ಕರ್ ಕೂಡ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಸೆಲ್ಸುರಾ ಪ್ರದೇಶದಲ್ಲಿ ರಾತ್ರಿ 1.30ರ ಸುಮಾರಿಗೆ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಝೈಲೋ ಕಾರು ಸೇತುವೆ ಯಿಂದ ನೇರವಾಗಿ ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ಎಲ್ಲಾ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್ಡೇಲ್ ಅವರ ಪುತ್ರ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇತರ ಆರು ಮಂದಿ ವೈದ್ಯಕೀಯ ಕೋರ್ಸ್ ಗಳಿಗಾಗಿ ದೇಶದ ವಿವಿಧ ಭಾಗಗಳಿಂದ ಬಂದವರು ಎಂದು ತಿಳಿದು ಬಂದಿದೆ. ವಾಹನ ನಿಯಂತ್ರಣ ತಪ್ಪಿ, ಸೇತುವೆಯಿಂದ ಸುಮಾರು 50 ಅಡಿ ಕೆಳಗೆ ಉರುಳಿ ಬಿದ್ದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ