ದೆಹಲಿಯಲ್ಲಿ ಸದ್ದು ಮಾಡ್ತಿದೆ ಮುಡಾ ಹಗರಣ : ಸಂಸತ್‌ ಆವರಣದಲ್ಲಿ bjp ಸಂಸದರ ಪ್ರತಿಭಟನೆ

ನವದೆಹಲಿ

     ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ಹಗರಣವನ್ನು ವಿರೋಧಿಸಿ ಕರ್ನಾಟಕದ ಬಿಜೆಪಿ ಸದಸ್ಯರು ಶುಕ್ರವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

    ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಕಾಂಗ್ರೆಸ್ ಜನರಿಂದ 187 ಕೋಟಿ ಲೂಟಿ ಮಾಡಿದೆ, ದಲಿತರ ಹಣ ಲೂಟಿ ಆಗುತ್ತಿರುವಾಗ ರಾಹುಲ್ ಗಾಂಧಿ ಏನು ಮಾಡುತ್ತಿದ್ದರು ಅಂತಹ ಲೂಟಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಧೈರ್ಯವಿದ್ದರೇ ಸಿಬಿಐ ತನಿಖೆಗೆ ಅವಕಾಶ ನೀಡಲಿ ಎಂದರು.

   ಇನ್ನು ಮುಡಾ ವಿಚಾರವಾಗಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ವಿಧಾನಸಭೆಯಲ್ಲಿ ಪ್ರಕರಣದ ವಿಚಾರಣೆಗೆ ಅವಕಾಶ ನೀಡಲು ಸಿದ್ದರಾಮಯ್ಯ ಸಿದ್ಧರಿಲ್ಲ, ಪ್ರತಿಪಕ್ಷಗಳ ಎಲ್ಲಾ ನಾಯಕರು ಚರ್ಚೆಗೆ ಆಗ್ರಹಿಸುತ್ತಿದ್ದರೂ ವಿಸ್ತೃತ ಚರ್ಚೆಯನ್ನು ನಿರಾಕರಿಸಲಾಗುತ್ತಿದೆ. ಈ ಕಾರಣಕ್ಕೆ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.

   ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಸರ್ಕಾರವಾಗಿದೆ, ಹಿಂದುಳಿದವರ ಚಾಂಪಿಯನ್ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ, ಆದರೆ ಅವರು ಇಂತಹ ದೊಡ್ಡ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕರ್ನಾಟಕದ ಮತ್ತೋರ್ವ ಸಂಸದ ಬ್ರಿಜೇಶ್ ಚೌಟ ಮಾತನಾಡಿ ಆರೋಪಿಸಿದರು.

   ಅತ್ಯಂತ ದುರದೃಷ್ಟಕರ ಸಂಗತಿ ಎಂದರೆ ಸಿದ್ದರಾಮಯ್ಯ ಅವರು ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದಾರೆ, ಮುಡಾ ಅಕ್ರಮ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು, ತನಿಖೆ ಎದುರಿಸಬೇಕು ಎಂದು ಬಿಜೆಪಿ ಸಂಸದರು ಆಗ್ರಹಿಸಿದರು.

   ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ‘ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಮಟ್ಟ ಭಯಾನಕವಾಗಿದೆ, ಅದಕ್ಕಾಗಿಯೇ ಜನರು ನಿರಂತರವಾಗಿ ಈ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ. ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ, ಆದರೆ ದುರದೃಷ್ಟವಶಾತ್, ಅವರು ಮುಡಾ ವಿಷಯದ ಬಗ್ಗೆ ಯಾವುದೇ ಚರ್ಚೆಗೆ ಅವಕಾಶ ನೀಡುತ್ತಿಲ್ಲ, ಕರ್ನಾಟಕದ ಸಿಎಂ ನೇರವಾಗಿ ಭಾಗಿಯಾಗಿದ್ದಾರೆ. ಮುಡಾ ಹಗರಣವು ದೇಶದ ಭ್ರಷ್ಟಾಚಾರದ ಮೂಲವಾಗಿದೆ,ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.

Recent Articles

spot_img

Related Stories

Share via
Copy link
Powered by Social Snap