ಬೆಂಗಳೂರು:
ರಾಜ್ಯದ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಳೆಯ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ಲಿಂಗಾಯತ ಸಮುದಾಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಬಿಜೆಪಿ ಪಾಳೆಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ ಬದಲಾವಣೆಗೆ ಕಾರಣರಾಗಿದ್ದಾರೆ, ಸಮುದಾಯದ ನಿಲುವನ್ನು ಸ್ಪಷ್ಟಪಡಿಸಿದ ಪಂಚಮಸಾಲಿ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ನಮ್ಮ ಕೋಪ ಕೇವಲ ಮೀಸಲಾತಿ ವಿಷಯದ ಮೇಲಿದೆ.
ಎರಡು ವರ್ಷ ಕಳೆದರೂ ಬಿಜೆಪಿ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ನಾವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ನಮ್ಮೊಂದಿಗೆ ಮಾತನಾಡಲು ಸರ್ಕಾರಕ್ಕೆ ಸಮಯವಿಲ್ಲ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಂದು ನಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.