ಬೆಂಗಳೂರು:
ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮೈತ್ರಿ ಪಕ್ಷದ ಒಂದು ಪಕ್ಷವಾದ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.ವಿಧಾನ ಪರಿಷತ್‌ನ 6 ಕ್ಷೇತ್ರಗಳ ಪೈಕಿ 1 ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ.
ಉಳಿದ ಐದು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಅವರನ್ನು ಕಣಕ್ಕಳಿಸಿದೆ.
ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಮತ್ತು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ