lulu mall ವಿರುದ್ಧ ಸುಳ್ಳು ಸುದ್ದಿ : ಬಿಜೆಪಿ ಕಾರ್ಯಕರ್ತೆ ವಿರುದ್ದ ಪ್ರಕರಣ ದಾಖಲು

ತುಮಕೂರು:

     ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್‌ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಈ ಸಂಬಂಧ ಆಕೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

     ತುಮಕೂರು ನಗರದ ಜಯನಗರ ಪೊಲೀಸರು ಬಿಜೆಪಿ ಕಾರ್ಯಕರ್ತೆಯ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 153 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ನೀಡಿದ್ದಾರೆ.

     ಬಿಜೆಪಿ ಕಾರ್ಯಕರ್ತೆ ಶೇರ್ ಮಾಡಿರುವ ಪೋಸ್ಟ್ ನಕಲಿ ಮತ್ತು ಸುಳ್ಳು ಎಂದು ಸತ್ಯ ಪರಿಶೀಲನಾ ವಿಭಾಗ ಖಚಿತಪಡಿಸಿದ್ದು, ನಂತರ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

     ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಪ್ರತಿನಿಧಿಸುವ ವಿವಿಧ ದೇಶಗಳ ಧ್ವಜಗಳನ್ನು ಮಾಲ್‌ನಲ್ಲಿ ಪ್ರದರ್ಶಿಸಲಾಯಿತು. ಎಲ್ಲಾ ದೇಶಗಳ ಧ್ವಜಗಳನ್ನು ಸಮಾನ ಎತ್ತರದಲ್ಲಿ ಇರಿಸಲಾಗಿತ್ತು. ಆದರೆ, ಪಾಕಿಸ್ತಾನದ ಧ್ವಜದ ಕೆಳಗೆ ಭಾರತದ ಧ್ವಜ ಕಾಣಿಸುವ ರೀತಿಯಲ್ಲಿ ಫೋಟೊ ತೆಗೆಯಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap