ತುಮಕೂರು:
ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್‌ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಈ ಸಂಬಂಧ ಆಕೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ತುಮಕೂರು ನಗರದ ಜಯನಗರ ಪೊಲೀಸರು ಬಿಜೆಪಿ ಕಾರ್ಯಕರ್ತೆಯ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 153 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತೆ ಶೇರ್ ಮಾಡಿರುವ ಪೋಸ್ಟ್ ನಕಲಿ ಮತ್ತು ಸುಳ್ಳು ಎಂದು ಸತ್ಯ ಪರಿಶೀಲನಾ ವಿಭಾಗ ಖಚಿತಪಡಿಸಿದ್ದು, ನಂತರ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
