ಕಣದಿಂದ ಹಿಂದೆ ಸರಿದ ಅಭ್ಯರ್ಥಿ : ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬೆಂಬಲ..!

ಸಾಗರ: 

      ರಾಮನಗರ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಆದರೆ ಈಗ ಬಿಜೆಪಿಯು ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಸೂಚಿಸುವತ್ತ ಚಿಂತನೆ ನಡೆಸುತ್ತಿದೆ. 

      ಸಿಎಂ ಪತ್ನಿಯನ್ನು ಗೆಲ್ಲಿಸುವ ಸಲುವಾಗಿ ತಂತ್ರ, ಕುತಂತ್ರ ರೂಪಿಸಿ ನಮ್ಮ ಅಭ್ಯರ್ಥಿಯನ್ನು ಡಿಕೆ ಸಹೋದರರು ಹಣಕೊಟ್ಟು ಖರೀದಿ ಮಾಡಿದ್ದಾರೆ ಎಂದು ಬಿ ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

      ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಒಂದು ವಾರದ ಹಿಂದೆಯೇ ಈ ಸೂಚನೆ ಸಿಕ್ಕಿದ್ದರಿಂದ ಅವರ ಪರ ಪ್ರಚಾರಕ್ಕೆ ಹೋಗಿರಲಿಲ್ಲ. ಆದರೆ ಆಗಲೇ ‘ಬಿ’ ಫಾರಂ ಕೊಟ್ಟಾಗಿದ್ದ ಕಾರಣ ಬದಲಿಸುವ ಸಾಧ್ಯತೆ ಇರಲಿಲ್ಲ. ಇಂತಹ ಕೀಳುಮಟ್ಟದ ರಾಜಕಾರಣಕ್ಕೆ ಬಿಜೆಪಿ ಯಾವತ್ತು ಹೆದರುವುದಿಲ್ಲ. ಸ್ವತಃ ಕಾರ‌್ಯಕರ್ತರಿಗೆ ನೋವಾಗಿದೆ. ಪ್ರಸ್ತುತ ಈಗ ಅಲ್ಲಿ ಕಣದಲ್ಲಿರುವ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಲು ತೀರ್ಮಾನ ಕೈಗೊಳ್ಳಲಾಗುತ್ತಿದೆ. ಈ ಕುರಿತು ಅಲ್ಲಿಗೆ ಮಾಹಿತಿ ನೀಡಲಾಗಿದೆ ಎಂದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap