ಗ್ಯಾರೆಂಟಿ ಚರ್ಚೆಗೆ ಅವಕಾಶ : ಪ್ರತಿಭಟನೆ ಹಿಂಪಡೆದ ಬಿಜೆಪಿ

ಬೆಂಗಳೂರು: 

    ಕಾಂಗ್ರೆಸ್‌ನ ಐದು ‘ಖಾತರಿ’ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು. 

    ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು. 

    ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap