ಹುಬ್ಬಳ್ಳಿ ಗಲಭೆಗೆ ಬಿಜೆಪಿ ಕುಮ್ಮಕ್ಕು ಕಾರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು:

‘ಹುಬ್ಬಳ್ಳಿ ವಿಚಾರದಲ್ಲಿ ಶಾಂತಿ ಕಾಪಾಡಲು ನಮ್ಮ ಪಕ್ಷದ ಎಲ್ಲ ನಾಯಕರು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ. ಆದರೂ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಘಟನೆಗಳಿಗೆ ಮೂಲ ಪ್ರಚೋದನೆ ಬಿಜೆಪಿಯವರ ಕುಮ್ಮಕ್ಕಿನಿಂದಾದ ಟ್ವೀಟ್. ಇದಕ್ಕೆ ಬಿಜೆಪಿಯವರೇ ಕಾರಣ. ಅದರ ಬಗ್ಗೆ ತನಿಖೆ ಆಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಗ್ರಹಿಸಿದ್ದಾರೆ.

ಭಾರತ ಪ್ರವಾಸ: ಗಾಂಧಿ ಆಶ್ರಮಕ್ಕೆ ಭೇಟಿ ನೀಡಿದ ಬ್ರಿಟನ್​ ಪ್ರಧಾನಿ ಸಂದರ್ಶಕರ ಪುಸ್ತಕದಲ್ಲಿ​ ಬರೆದಿದ್ದು ಹೀಗೆ

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ‘ಕೆಲವು ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ. ನಮ್ಮ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಪರಿಸ್ಥಿತಿ ನಿಯಂತ್ರಿಸುವ ಸಂದರ್ಭದಲ್ಲಿ ಕಲ್ಲೇಟು ತಿಂದು, ಕೈ ಮುರಿದುಕೊಂಡು, ನೋವು ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳ ಪ್ರಮಾಣ ವಚನ ಸ್ವೀಕಾರ

ಆದರೆ ಯಡಿಯೂರಪ್ಪ ಅವರಾಗಲಿ , ಅಶೋಕ್ ಅವರಾಗಲಿ ಪರಿಸ್ಥಿತಿ ತಿಳಿಗೊಳಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಬದಲಿಗೆ ಅವರು ಬೇಕೆಂದು ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಸುಮ್ಮನೆ ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ.

ಭಾರತದ ಬ್ರಹ್ಮೋಸ್ ಕ್ಷಿಪಣಿಯ ‘ಡಬಲ್ ಹಿಟ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಅವರು ತಮ್ಮ 40 % ಕಮಿಷನ್ ವಿಚಾರ ಮುಚ್ಚಿಹಾಕಲು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.ಕಾಂಗ್ರೆಸ್ ನವರಿಗೂ ಹುಬ್ಬಳ್ಳಿ ಗಲಭೆಗೂ ಯಾವುದೇ ಸಂಬಂಧ ಇಲ್ಲ. ನಮ್ಮವರು ಶಾಂತಿ ಕಾಪಾಡಲು ಶ್ರಮಿಸಿದ್ದಾರೆ ಅಷ್ಟೇ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link