ಸರ್ಕಾರದ ವಿರುದ್ದ ಬಿಜೆಪಿ ಟ್ವೀಟ್‌ ….!

ಬೆಂಗಳೂರು

      ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

     ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶುರುವಾಗಿರುವ ಅವಾಂತರಗಳು. ಸರ್ಕಾರಿ ಮಹಿಳಾ ಅಧಿಕಾರಿಗಳ ಕೊಲೆ. ಸರ್ಕಾರಿ ಅಧಿಕಾರಿಗಳ ಮೇಲೆ ಗುಂಪು ಹಲ್ಲೆ. ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಕಾಂಗ್ರೆಸ್ ಸುಳ್ಳು ಭರವಸೆ ನೀಡಿದೆ: ಅನುರಾಗ್ ಠಾಕೂರ್ ಆರೋಪ ಭಯೋತ್ಪಾದಕರ ಅಡಗುತಾಣವಾಗುತ್ತಿರುವ ಕರ್ನಾಟಕ. ರಾಜ್ಯದೆಲ್ಲೆಡೆ ಹೆಚ್ಚುತ್ತಿರುವ ಮತೀಯ ಶಕ್ತಿಗಳ ಅಪರಾಧ ಚಟುವಟಿಕೆ.  ಮಿತಿ ಮೀರಿದ ಭ್ರಷ್ಟಾಚಾರ.

     ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲಿಂದ ನೇಕಾರರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ ಎಂಬುದಕ್ಕೆ ತುಮಕೂರು ಜಿಲ್ಲೆಯೊಂದರಲ್ಲೇ 150ಕ್ಕೂ ಹೆಚ್ಚು ನೇಕಾರರ ಕುಟುಂಬಗಳು ಬೀದಿಗೆ ಬಿದ್ದಿರುವುದು ತಾಜಾ ನಿದರ್ಶನ. ಕಾಂಗ್ರೆಸ್ ಸರ್ಕಾರ ತಂದೊಡ್ಡಿರುವ ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಕೃಪೆಯಿಂದಾಗಿ ಪಾರಂಪರಿಕ ನೇಕಾರಿಕಾ ಕಲೆಗಾರಿಕೆಗೂ ನಶಿಸುವ ಅಪಾಯ ತಲೆದೋರುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಇಂಧನ ಸಚಿವ ಕೆ ಜೆ ಜಾರ್ಜ್‌ ಮಾತ್ರ ಕರೆಂಟ್‌ ಇಲ್ಲದ ಕತ್ತಲಿನಲ್ಲಿ ಕಾಣೆಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap