ಬಿಜೆಪಿಯೇ ಕಿಂಗ್‌ ಆಗಲಿದೆ : ಬೊಮ್ಮಾಯಿ

ಬೆಂಗಳೂರು:

    ನಾವು ಸ್ವಂತ ಬಲದಿಂದ ಸರ್ಕಾರ ರಚಿಸುತ್ತೇವೆ ಜೆಡಿಎಸ್ ಕಿಂಗ್‌ಮೇಕರ್ ಆಗುವುದಿಲ್ಲ, ಸಂಪೂರ್ಣ ಬಹುಮತ ಬರುವುದರಿಂದ ನಾವೇ ಕಿಂಗ್ ಆಗುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುವ ವಿಶ್ವಾಸವಿದೆ, ಪ್ರಧಾನಿಯವರ ವರ್ಚಸ್ಸು, ಸಾಮಾಜಿಕ ಇಂಜಿನಿಯರಿಂಗ್ ಮತ್ತು ಡಬಲ್ ಇಂಜಿನ್ ಸರ್ಕಾರದ ಕಾರ್ಯಕ್ಷಮತೆಯ ಮೇಲೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.ನಾವು ಸ್ವಂತ ಬಲದಿಂದ ಸಂಪೂರ್ಣ ಬಹುಮತ ಪಡೆಯುತ್ತೇವೆ.
    ಎಕ್ಸಿಟ್ ಪೋಲ್‌ಗಳು 5 ರಿಂದ 10%  ಮಾತ್ರ ನಿಜವಿರುತ್ತದೆ ಇರುತ್ತದೆ. ಅದು 100% ನಿಖರವಾಗಿಲ್ಲ. ಪ್ರತಿ ಏಜೆನ್ಸಿಯು ವಿಭಿನ್ನ ಫಲಿತಾಂಶವನ್ನು ನೀಡುತ್ತದೆ, ಅದು ಸ್ಥಿರವಾಗಿಲ್ಲ. ನಮಗೆ ಸಂಪೂರ್ಣ ಬಹುಮತ ಸಿಗಲಿದೆ ಎಂಬ ಸಂಪೂರ್ಣ ಗ್ರೌಂಡ್ ರಿಪೋರ್ಟ್ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದು ಜೆಡಿಎಸ್ ಕಿಂಗ್ ಮೇಕರ್ ಆಗುವ ಪ್ರಶ್ನೆಯೇ ಇಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap