ಬಿಜೆಪಿ ಮತ್ತೆ ಅಧಿಕಾರಕ್ಕೆ: ನಳಿನ್‌ಕುಮಾರ್ ಕಟೀಲ್

ಬೆಂಗಳೂರು

     ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆ ಮತ್ತು ಜನಬೆಂಬಲ ಕಾಣುತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

     ಬಿಜೆಪಿ ರಾಜ್ಯ ಕಾರ್ಯಾಲಯ ?ಜಗನ್ನಾಥ ಭವನ?ದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಆಪ್ ಮುಖಂಡರಿಗೆ ಧ್ವಜ ನೀಡಿ, ಶಾಲು ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿ ಮಾತನಾಡಿದರು.

    ಪಕ್ಷ ಗಟ್ಟಿ ಮಾಡಿ ರಾಜಕಾರಣದ ಮೂಲಕ ಸೇವೆ ಮಾಡಲು ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಭಾಸ್ಕರ್ ರಾವ್ ಅವರು ನಿವೃತ್ತಿ ಬಳಿಕ ಆಪ್ ಸೇರಿ ಇದೀಗ ಕಲ್ಯಾಣ ಕರ್ನಾಟಕದ ಉದ್ದೇಶದಿಂದ ಪಕ್ಷ ಸೇರಿದ್ದಾರೆ. ಅವರ ಸಹವರ್ತಿಗಳನ್ನೂ ಸ್ವಾಗತಿಸುವೆ ಎಂದರು.

    ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಮಾತನಾಡಿ, ಮತ್ತೆ ಸನಾತನ ಧರ್ಮಕ್ಕೆ ಸೇರಿದ ಪಕ್ಷ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷಕ್ಕೆ ಸೇರಿದ್ದೇನೆ. ನಾನು ಬಾಲ್ಯಕಾಲದಿಂದ ಸನಾತನ ಧರ್ಮ, ರಾಷ್ಟ್ರೀಯತೆಗೆ ಬದ್ಧನಾಗಿದ್ದವ. ಆಮ್ ಆದ್ಮಿ ಪಕ್ಷದಲ್ಲಿ ಒಂದು ವರ್ಷ ಇದ್ದರೂ ಅದು ರಾಜ್ಯದಲ್ಲಿ ಬೆಳೆಯುವ ಸಾಧ್ಯತೆ ಕಡಿಮೆ ಅನಿಸಿತು ಎಂದು ತಿಳಿಸಿದರು.

    ಮೋದಿಜಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಲ್.ಸಂತೋಷ್, ಯಡಿಯೂರಪ್ಪ, ಕಟೀಲ್, ಪ್ರಲ್ಹಾದ ಜೋಶಿ ಅವರ ಪಕ್ಷದ ಜೊತೆ ಇರಲು ಬಂದಿದ್ದೇನೆ. ಪಕ್ಷದ ಕಾರ್ಯಕ್ರಮಗಳಿಗೆ ಸಹಕರಿಸುವೆ. ಅಖಂಡ ಭಾರತವನ್ನು ಗಟ್ಟಿಯಾಗಿ ಇಡಲು ಇದೊಂದೇ ಪಕ್ಷದಿಂದ ಸಾಧ್ಯ ಎಂದರು.ಪಕ್ಷ ಕಟ್ಟುವಾಗ ಯುವಕರು, ಮಹಿಳೆಯರಿಗೆ ಆದ್ಯತೆ ಕೊಡುವುದು ಖುಷಿ ಕೊಟ್ಟಿದೆ. ಪಕ್ಷದ ಮುಖಂಡರ ಮಾರ್ಗದರ್ಶನದಂತೆ ಜವಾಬ್ದಾರಿ ವಹಿಸಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

    ಪಕ್ಷದ ಹಿರಿಯ ಮುಖಂಡ ಶಂಕರಪ್ಪ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಮ್ ಆದ್ಮಿ ಪಕ್ಷದ ರಾಜ್ಯ ಸಹಕಾರ್ಯದರ್ಶಿ ವಿಜಯ್ ಶಾಸ್ತಿçಮಠ್, ಮಾಜಿ ಮುಖ್ಯವಕ್ತಾರ ಶರತ್ ಖಾದ್ರಿ, ಸಮಾಜಸೇವಕ ಶಿವಶರ್ಮ, ಬಸವನಗುಡಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಆರ್ಯನ್, ಅಂಜನ್‌ರಾವ್, ಬೆಂಗಳೂರು ಮಹಾನಗರದ ಪ್ರಧಾನ ಕಾರ್ಯದರ್ಶಿ ದಿಲೀಪ್ ಗೌಡ ಅವರು ಆಪ್ ತೊರೆದು ಬಿಜೆಪಿ ಸೇರಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap