ಬಿಜೆಪಿ ನಮ್ಮನ್ನು ಕೈಬಿಡುವುದಿಲ್ಲ : ಕಾಂತೇಶ್

ಬೆಂಗಳೂರು

    ಬಿಜೆಪಿ ನಮ್ಮನ್ನು ಕೈಬಿಡುವುದಿಲ್ಲ. ಪಕ್ಷದ ಮೇಲೆ ನಮಗೆ ನಂಬಿಕೆ ಇದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶಿವಮೊಗ್ಗದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ, ಆರೆಸೆಸ್, ನನ್ನ ತಂದೆ ಮತ್ತು ಕುಟುಂಬವನ್ನು ಸಂಸ್ಕಾರದಿಂದ ಬೆಳೆಸಿದೆ. ನನಗೆ ಸಂಪೂರ್ಣವಾದ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ಒಳ್ಳೇದಾಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ಪಕ್ಷ ನಮ್ಮ ಕೈ ಬಿಡುವುದಿಲ್ಲ. ನನಗೆ ಒಂದು ಅವಕಾಶ ಸಿಗುವ ನಂಬಿಕೆ ಹೊಂದಿದ್ದೇನೆ ಎಂದರು.

    ಪಕ್ಷದ ವರಿಷ್ಠರು ಮತ್ತು ನಮ್ಮ ತಂದೆ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ಸಾವಿರಾರು ಕಾರ್ಯಕರ್ತರಿಗೆ ನಮ್ಮ ತಂದೆ ಮಾದರಿ. ಒಂದು ವೇಳೆ ಪಕ್ಷ ಟಿಕೆಟ್ ನೀಡದಿದ್ದರೂ ಸಹ ಅದಕ್ಕೂ ಬದ್ಧರಾಗಿರುತ್ತೇವೆ ಎಂದು ಕಾಂತೇಶ್ ಸ್ಪಷ್ಟಪಡಿಸಿದರು. ಸಾಯೋವರೆಗೂ ಪಕ್ಷದ ತೀರ್ಮಾನವನ್ನು ಪರಿಪಾಲಿಸುತ್ತೇವೆ. ಮುಂದಿನ ದಿನಗಳಲ್ಲಿ ಒಳ್ಳೇದಾಗಲಿದೆ ಎಂದು ಹೇಳಿದರು. ಪಕ್ಷದ ಹಿರಿಯ ಮುಖಂಡ ಅಯನೂರ್ ಮಂಜುನಾಥ್ ಬೇರೆ ಪಕ್ಷಕ್ಕೆ ಸೇರುವುದಿಲ್ಲ. ಅವರು ಬಿಜೆಪಿಯಲ್ಲೇ ಉಳಿಯುತ್ತಾರೆ. ಪಕ್ಷ ಯಾರನ್ನೇ ಅಭ್ಯರ್ಥಿ ಮಾಡಿದರೂ ಆಯನೂರು ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link