ರಾಯಚೂರು
ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳು ಅವರವರ ತಂತ್ರಗಾರಿಕೆಯಲ್ಲಿ ತೊಡಗಿದ್ದು, ಬಿಜೆಪಿ ಪಕ್ಷವು ಇದಕ್ಕೆ ಹೊರತಾಗಿಲ್ಲ ಜಿಲ್ಲೆಯಲ್ಲಿ ಪ್ರಚಾರ ಚುರುಕುಗೊಳಿಸಲು ಮುಂದಾಗಿದ್ದು. ಚುನಾವಣೆ ನೀತಿ ಸಂಹಿತೆಯ ಜಾರಿಯಾಗುವ ತರಾತುರಿಯಲ್ಲಿ ಮಾರ್ಚ್24 ರಂದು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲು ನಿರ್ಧರಿಸಿದೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಭರ್ಜರಿಯಾಗಿ ರಾಜಕೀಯ ದಾಳ ಉರುಳಿಸಲು ಮುಂದಾಗಿದೆ. ಕೇಂದ್ರ ನಾಯಕರನ್ನು ಜಿಲ್ಲೆಗೆ ಕರೆಯಿಸುವತ್ತ ಗಮನಹರಿಸಿದ್ದು ಮಾ.24 ರಂದು ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ಧರಿಸಿದೆ.
ಮಾರ್ಚ್ ತಿಂಗಳಾಂತ್ಯಕ್ಕೂ ಮೊದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತದೆ ಎನ್ನುವ ಆತಂಕದಲ್ಲಿ ನೀತಿಸಂಹಿತೆ ಜಾರಿಗೂ ಮೊದಲೇ ದೊಡ್ಡ ಮಟ್ಟದಲ್ಲಿ ಜಿಲ್ಲೆಯ ಸೂಕ್ತ ಸ್ಥಳದಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡುವ ಕಾರ್ಯಕ್ಕೆ ಬಿಜೆಪಿ ನಿರ್ಧರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
