ಬೆಂಗಳೂರು:
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಇನ್ನು ಕೆಲವೇ ಗಂಟೆಯಲ್ಲಿ ಸ್ಪಷ್ಟ ಚಿತ್ರಣ ಸಿಗಲಿದ್ದು, ಸದ್ಯದ ಬೆಳವಣಿಗೆಯಲ್ಲಿ ಪಂಜಾಬ್ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
ಸಿಎಂ ಕಚೇರಿಯಲ್ಲಿ ಸಂಭ್ರಮ ಆಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಹಿ ತಿನಿಸಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಗಿದೆ. ಯಲಹಂಕ ವಿಶ್ವನಾಥ್, ಸಚಿವ ಮುನಿರತ್ನ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
ಮೈಸೂರು ಬಿಜೆಪಿ ಕಚೇರಿ ಮುಂಭಾಗ ಗೋವಿಗೆ ಪುಷ್ಪಾರ್ಚನೆ ಮಾಡಿದ ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಭಾವಚಿತ್ರ ಹಿಡಿದು ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು. ಹೀಗೆ ರಾಜ್ಯಾದ್ಯಂತ ಬಿಜೆಪಿ ಸಂಭ್ರಮಾಚಾರಣೆ ಮಾಡುತ್ತಿದೆ.
ಸಿಎಂ ಕಚೇರಿಯಲ್ಲಿ ಸಂಭ್ರಮ ಆಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಹಿ ತಿನಿಸಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಗಿದೆ. ಯಲಹಂಕ ವಿಶ್ವನಾಥ್, ಸಚಿವ ಮುನಿರತ್ನ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ