ಬಿಜೆಪಿ ಗೆಲುವು : ಕಾರ್ಯಕರ್ತರ ವಿಜಯೋತ್ಸವ

ಗುಬ್ಬಿ:

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 4 ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವುದು ದೇಶದ ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಪಂಚ ರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಗೆಲುವು ಪಡೆದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಆಡಳಿತ ಅವರು ನೀಡಿದಂತಹ ಜನಪರ ಯೋಜನೆಗಳು ಇಡೀ ದೇಶದಲ್ಲಿ ಬಿಜೆಪಿಯ ಪರವಾದ ಅಲೆ ಇದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಇದು ಪಕ್ಷದ ಹಾಗೂ ಕಾರ್ಯಕರ್ತರ ಗೆಲುವಾಗಿದೆ. ಈ ಗೆಲುವು ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚು ಮಾಡಿದೆ ಎಂದು ತಿಳಿಸಿದರು.

ಜಿಪಂ ಮಾಜಿ ಸದಸ್ಯ ಚಂದ್ರಶೇಖರಬಾಬು ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿಯವರು ಮಾಡುತ್ತಿರುವಂತಹ ಅಭಿವೃದ್ಧಿ ಕಾರ್ಯಗಳೆ ಬಿಜೆಪಿ ಪಕ್ಷಕ್ಕೆ ವರದಾನವಾಗಿದ್ದು ಮುಂದೆ ನಡೆಯುವಂತಹ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ಈ 4 ರಾಜ್ಯಗಳ ಗೆಲುವು ಬಿಜೆಪಿ ಕಾರ್ಯಕರ್ತರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಲು ಹುಮ್ಮಸ್ಸು ಮೂಡಿಸಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೈರಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಯತೀಶ್, ಪಪಂ ಸದಸ್ಯ ಕೃಷ್ಣಮೂರ್ತಿ, ಬಸವರಾಜು, ಪ್ರಕಾಶ್, ಮುಖಂಡರಾದ ಜಿ.ಎನ್.ಬೆಟ್ಟಸ್ವಾಮಿ, ಎಪಿಎಂಸಿ ಅಧ್ಯಕ್ಷ ಲಕ್ಷ್ಮಿರಂಗಯ್ಯ, ಲೋಕೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

 

-ಅಣ್ಣಪ್ಪಸ್ವಾಮಿ, ಪಪಂ ಅಧ್ಯಕ್ಷ

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap