ಬೆಂಗಳೂರು:
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಅದಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬೆಂಗಳೂರು ಮಹಾನಗರ ಸಾರಿಗೆ ನಿಗಮ (BMTC) ನೌಕರರ ಸಂಘವೂ ಬೆಂಬಲ ಸೂಚಿಸಿದೆ. ಹೀಗಾಗಿ ಬಂದ್ ದಿನ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರದಲ್ಲೂ ವ್ಯತ್ಯಯವಾಗಬಹುದು ಎನ್ನಲಾಗುತ್ತಿದೆ.
ಕರ್ನಾಟಕದ 195ಕ್ಕೂ ಹೆಚ್ಚು ತಾಲೂಕುಗಳು ಮಳೆ ಕೊರತೆಯಿಂದ ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ. ರಾಜ್ಯದ ಎಲ್ಲ ಜಲಾಶಯಗಳ ನೀರು ಬಳಕೆಗೆ ಸಾಕಾಗುತ್ತಿಲ್ಲ. ಮಳೆಯ ಮುನ್ಸೂಚನೆಯೂ ಆಶಾದಾಯಕವಾಗಿಲ್ಲ. ಈ ಪರಿಸ್ಥಿತಿಯಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ.
ರಾಜ್ಯಾದ್ಯಂತ ಹಲವಾರು ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಮತ್ತು ಇತರರು ಈಗಾಗಲೇ ನ್ಯಾಯಕ್ಕಾಗಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ನಾವೂ ಬಂದ್ ಅನ್ನು ಬೆಂಬಲಿಸುತ್ತೇವೆ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಶನ್ ಶನಿವಾರ ಹೇಳಿದೆ.
ಕಾವೇರಿ ಭಾಗದಲ್ಲಿ ಆಂದೋಲನ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಆ ಬಂದ್ ಕರೆಗೆ ನಮ್ಮ ಒಕ್ಕೂಟ ಸಂಪೂರ್ಣ ಬೆಂಬಲ ನೀಡುತ್ತದೆ. ಬಿಎಂಟಿಸಿಯ ಎಲ್ಲಾ ಘಟಕಗಳಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಯಾವುದೇ ಬಸ್ಸುಗಳನ್ನು ಓಡಿಸದೆ ಬಂದ್ ಅನ್ನು ಯಶಸ್ವಿಗೊಳಿಸಲು ನಾವು ಎಲ್ಲಾ ನೌಕರರಿಗೆ ಕರೆ ನೀಡುತ್ತೇವೆ. ಯಾವುದೇ ರೀತಿಯ ಪ್ರಚೋದನೆ ಮತ್ತು ಬೆದರಿಕೆಗಳಿಲ್ಲದೆ ಬಂದ್ ಯಶಸ್ವಿಯಾಗುತ್ತದೆ ಎಂದು ನಾವು ನಂಬುತ್ತೇವೆ ಎಂದು ಸಂಘ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ