ಬೆಂಗಳೂರು:
ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು