ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್​ …..!

ಬೆಂಗಳೂರು:

    ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

    ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್‌ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ