ಬೆಂಗಳೂರು : 
ಉಳಿಕೆ ಮೂಲ ವೃಂದದ ಬಿಎಂಟಿಸಿ ನಿರ್ವಾಹಕ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ ಆದೇಶ ಪತ್ರ ನೀಡುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದಿಂದ ಸೋಮವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕಾಂತಕುಮಾರ್, ಬಿಎಂಟಿಸಿಯು ಕಳೆದ ವರ್ಷ ಫೆಬ್ರವರಿಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದ 2500 ನಿರ್ವಾಹಕ ಹುದ್ದೆಗೆ ಅಧಿಸೂಚನೆ ಹೊರಡಿಸಿ ನೇಮಕಾತಿ ಪೂರ್ಣಗೊಂಡ ನಂತರ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ನಾಲ್ಕು ತಿಂಗಳ ಹಿಂದೆಯೇ ನೇಮಕಾತಿ ಆದೇಶ ನೀಡಿದ್ದು ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಆದರೆ ಉಳಿಕೆ ಮೂಲ ವೃಂದದ 2286 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜನವರಿ 2025 ರಲ್ಲಿ ಪ್ರಕಟಿಸಲಾಗಿದೆ. ಆದರೆ ಇಲ್ಲಿಯವರೆಗೂ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ಪತ್ರ ನೀಡದೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಆದ್ದರಿಂದ ತಕ್ಷಣ ನೇಮಕಾತಿ ಆದೇಶ ಪತ್ರ ನೀಡಬೇಕು ಎಂದು ಅವರು ಆಗ್ರಹಿಸಿದರು.
ಇನು ಪ್ರತಿಭಟನೆಯಲ್ಲಿ ಸುಮಾರು 500 ಜನ ಭಾಗವಹಿಸಿದರು. ಪ್ರತಿಭಟನೆ ಯಶಸ್ವಿಯಾಗಿದ್ದು ಮೇ 05 ರೊಳಗೆ ಅಂತಿಮ ಆಯ್ಕೆ ಪಟ್ಟಿ ಬಿಟ್ಟು , ಆರ್ಡರ್ ಕಾಫಿ ನೀಡುತ್ತೇವೆ ಎಂದು ಬಿಎಂಟಿಸಿ ಎಂಡಿವರು ತಿಳಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ ಕಾಂತಕುಮಾರ್ ತಿಳಿಸಿದರು.







