
ಬೆ0ಗಳೂರು : ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿಯೇ ಇತರರಿಗೂ ಮಾದರಿಯಾಗಿದ್ದ ಮಾಜಿ ಸಚಿವ, ಸಂಘ ಪರಿವಾರದ ಕಟ್ಟಾಳು ಹಿರಿಯ ನಾಯಕ ರಾಮಚಂದ್ರಗೌಡ(88) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ನಿಧನರಾದರು. ಅವರ ನಿಧನದಿಂದ ರಾಜ್ಯ ಬಿಜೆಪಿಯ ಹಿರಿಯ ತಲೆಮಾರಿನ ಕೊಂಡಿಯೊAದು ಕಳಚಿದಂತಾಗಿದೆ.
ಮೃತರು ಪತ್ನಿ ಶ್ರೀಯ,ಪುತ್ರ ಸಪ್ತಗಿರಿ ಗೌಡ, ಪುತ್ರಿ ಕವಿತಾ ಸೇರಿದಂತೆ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸಂಜೆ ಕಾಮಾಕ್ಷಿಪಾಳ್ಯದಲ್ಲಿರುವ ಪೇಟೆ ಚೆನ್ನಪ್ಪ ಎಸ್ಟೇಟ್ ನಲ್ಲಿ ಒಕ್ಕಲಿಗ ಸಂಪ್ರದಾಯದAತೆ ವಿಧಿ ವಿಧಾನಗಳೊಂದಿಗೆ ನೆರವೇರಿತು. ಬಸವೇಶ್ವರ ನಗರದಲ್ಲಿರುವ ಅವರ ನಿವಾಸದಲ್ಲಿ ಸಂಜೆ 4 ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಕಂಬನಿ: ರಾಮಚಂದ್ರಗೌಡ ಅವರ ನಿಧನಕ್ಕೆ ಆದಿಚುಂಚನಗಿರಿ ಪೀಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ನಿತಿನ್ ನವೀನ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜ್ನಾಥ್ ಸಿಂಗ್, ಮಾಜಿ ಉಪರಾಷ್ಟçಪತಿ ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಎಚ್.ಡಿ .ದೇವೇಗೌಡರು, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ , ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಪ್ರಹಲ್ಲಾದ್ ಜೋಶಿ, ವಿ ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ , ಸಿದ್ದರಾಮಯ್ಯ,ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಅನೇಕ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.








