ಆ.15 ರೊಳಗೆ 5927 ಗ್ರಾಪಂಗೆ ಗಾಂಧೀ ಹೆಸರು : ಸಚಿವ ಈಶ್ವರ ಬಿ ಖಂಡ್ರೆ ಹೇಳಿಕೆ

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ÷್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧೀ ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಇಲಾಖೆಯ ಆಯುಕ್ತಾಲಯದಲ್ಲಿಂದು ಪಿಡಿಓ, ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆ ಕೌನ್ಸಲಿಂಗ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟçಪಿತ ಮಹಾತ್ಮಾ ಗಾಂಧೀ ಹೆಸರನ್ನು ಚಿರಸ್ಥಾಯಿಗೊಳಿಸಲು 2026-27ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 279ರಲ್ಲಿ ಘೋಷಣೆ ಮಾಡಿರುವಂತೆ ಎಲ್ಲ ಪಂಚಾಯ್ತಿಗಳ ಹೆಸರು ಬದಲಾವಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಯುಪಿಎ ಕಾರ್ಯಕಾಲದಲ್ಲಿ ಗ್ರಾಮ ಸ್ವರಾಜ್ಯದ ಪ್ರತಿಪಾದಕರಾಗಿದ್ದ ರಾಷ್ಟçಪಿತ ಗಾಂಧೀ ಗೌರವಾರ್ಥ ಮಹಾತ್ಮಾಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ -ಮನ್ರೇಗಾ ಎಂದು ಹೆಸರಿಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಜುಲೈ 1ರಿಂದ ಜಾರಿಗೆ ತಂದಿರುವ ವಿ ಬಿ ಜಿ ರಾಮ್ ಜಿಯಲ್ಲಿ ಮಹಾತ್ಮಾ ಗಾಂಧೀ ಹೆಸರನ್ನೇ ತೆಗೆದು ಹಾಕಿದೆ. ಹೀಗಾಗಿ ರಾಜ್ಯ ಸರ್ಕಾರ ಎಲ್ಲ ಪಂಚಾಯತಿಗಳಿಗೆ ಗಾಂಧೀ ಹೆಸರಿಡಲು ತೀರ್ಮಾನಿಸಿದೆ ಎಂದರು.

ತಾವು ಕಳೆದ ತಿಂಗಳು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಸಮಾವೇಶದಲ್ಲಿ ದೇಶದಲ್ಲಿರುವ ಎಲ್ಲ 2.68 ಕೋಟಿ ಗ್ರಾಮ ಪಂಚಾಯತಿಗಳಿಗೂ ಮಹಾತ್ಮಾ ಗಾಂಧೀ ಹೆಸರಿಡುವಂತೆ ಆಗ್ರಹಿಸಿದ್ದಾಗಿ ತಿಳಿಸಿದರು.
ಅದೇ ರೀತಿ ವಿ ಬಿ ಜಿ ರಾಮ್ ಜಿ ಹೆಸರಿನ ಮುಂದೆ ಗಾಂಧೀ ಹೆಸರಿಟ್ಟು ಮಹಾತ್ಮಾ ಗಾಂಧೀ ವಿಬಿಜಿ ರಾಮ್ ಜಿ ಎಂದು ಮರು ನಾಮಕರಣ ಮಾಡುವಂತೆ ಒತ್ತಾಯಿಸಿದ್ದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.

ರಾಜ್ಯದ ಎಲ್ಲ ಹಳ್ಳಿಗಳನ್ನೂ ಆದರ್ಶ ಗ್ರಾಮ ಮಾಡಿ : ರಾಜ್ಯದಲ್ಲಿರುವ 5927 ಗ್ರಾಮಪಂಚಾಯತಿ ವ್ಯಾಪ್ತಿಯ ಎಲ್ಲ ಹಳ್ಳಿಗಳನ್ನೂ ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪಂಚಾಯ್ತಿ ಸಿಬ್ಬಂದಿಗೆ ಕರೆ ನೀಡಿದ್ದಾರೆ.

ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತಾಲಯದಲ್ಲಿಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಪಾದರ್ಶಕ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಭಾರತದ ಜೀವನಾಡಿ. ಆದರೆ ಇಂದು ಗ್ರಾಮೀಣ ಯುವಕರು ನಗರಗಳಿಗೆ ಹೋಗಿ ನೆಲೆಸುತ್ತಿದ್ದು, ಹಳ್ಳಿಗಳು ವೃದ್ಧಾಶ್ರಮಗಳಾಗಿ ಪರಿವರ್ತನೆ ಆಗುತ್ತಿವೆ. ತಮ್ಮ ಗ್ರಾಮದಲ್ಲೇ ಯುವಜನರಿಗೆ ಉದ್ಯೋಗ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಿದರೆ, ಗ್ರಾಮಾಭಿವೃದ್ದಿಯೂ ಆಗುತ್ತದೆ. ವಲಸೆಯೂ ನಿಲ್ಲುತ್ತದೆ ಎಂದರು.

ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಪಿಡಿಓ, ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರು ಪ್ರಾಮಾಣಿಕತೆ, ನಿಷ್ಠೆ, ದಕ್ಷತೆ ಮತ್ತು ಬದ್ಧತೆಯಿಂದ ಸಂಘಟಿತರಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದರೆ ಪ್ರತಿ ಗ್ರಾಮವೂ ಅಭಿವೃದ್ಧಿಹೊಂದುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ವೈಫಲ್ಯ ಎಂಬ ಕಾಯಿಲೆ ಗುಣಪಡಿಸುತ್ತದೆ ಎಂದು ಮಾಜಿ ರಾಷ್ಟçಪತಿ ಡಾ. ಎ.ಪಿ.ಜಿ. ಅಬ್ದುಲ್ ಕಲಾಂ ಹೇಳುತ್ತಿದ್ದರು. ನೀವೆಲ್ಲರೂ ಕಷ್ಟಪಟ್ಟು ಕೆಲಸ ಮಾಡದೆ, ಇಷ್ಟಪಟ್ಟು ಕೆಲಸ ಮಾಡಿ. ಆಗ ಪರಿವರ್ತನೆಯನ್ನು ನೀವೇ ನೋಡುತ್ತೀರಿ ಎಂದರು.

Recent Articles

spot_img

Related Stories

Share via
Copy link