4 ಐಎಎಸ್, ಕೆಎಎಸ್ ಅಧಿಕಾರಿಗಳು : ಡಿಹೆಚ್‌ಇ, 104 ವೈದ್ಯಾಧಿಕಾರಿಗಳ ವರ್ಗಾವಣೆ : ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ಸಾರ್ವತ್ರಿಕ ವರ್ಗಾವಣೆ ನಡೆಯುತ್ತಿದ್ದು, ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಇಬ್ಬರು ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಜುಲೈ 16 ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಪ್ರಕಾರ, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ದಿವ್ಯಾ ಪ್ರಭು ಜಿ.ಆರ್.ಜೆ. ಅವರನ್ನು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಇದರೊಂದಿಗೆ, ಅವರು ತಮ್ಮ ಹಿಂದಿನ ಹುದ್ದೆಯಾದ ಗ್ರಾಮೀಣಾಭಿವೃದ್ಧಿ ಆಯುಕ್ತ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಸಹ ಮುಂದುವರಿಸಲಿದ್ದಾರೆ.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ.ಪಿ. ರುದ್ರಪ್ಪಯ್ಯ ಅವರನ್ನು ವರ್ಗಾವಣೆ ಮಾಡಲಾಗಿದ್ದು, ತೆರವಾಗಿದ್ದ ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ನೇಮಕ ಮಾಡಲಾಗಿದೆ.
ಕರ್ನಾಟಕ ಸರ್ಕಾರವು ಆರೋಗ್ಯ ಇಲಾಖೆ ಮತ್ತೆ ವರ್ಗಾವಣೆ ಪರ್ವ ನಡೆಸಿದೆ. ಹಲವು ಜಿಲ್ಲೆಗಳ, ತಾಲೂಕುಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಡಿಎಚ್‌ಒ), ಜಿಲ್ಲಾ ಶಸ್ತçಚಿಕಿತ್ಸಕರು, ಇಲಾಖೆಯ ವಿವಿಧ ವಿಭಾಗಗಳ ನಿರ್ದೇಶಕರುಗಳನ್ನು ವರ್ಗಾವಣೆ ಮಾಡಿ ಹೊಸಬರ ನೇಮಕ ಮಾಡಲಾಗಿದೆ.

 

Recent Articles

spot_img

Related Stories

Share via
Copy link