ತುರ್ತು ಸಂಪುಟ ಸಭೆ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಸಿಎಂ, ಡಿಸಿಎಂ ಭೇಟಿ : ಚರ್ಚೆ

 


ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 3 ಗಂಟೆಗೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ರಾಜ್ಯದ ಈ ಆಡಳಿತಾತ್ಮಕ ತುರ್ತು ಬೆಳವಣಿಗೆಗಳ ಬೆನ್ನಲ್ಲೇ, ತೀವ್ರ ಕುತೂಹಲ ಮೂಡಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಕಸರತ್ತು ಕೂಡ ಅಂತಿಮ ಘಟ್ಟಕ್ಕೆ ತಲುಪಿದೆ. ಈ ಎರಡೂ ಪ್ರಮುಖ ವಿದ್ಯಮಾನಗಳ ಕುರಿತು ದೆಹಲಿ ಪ್ರವಾಸ ಮುಗಿಸಿ ಬಂದಿರುವ ಮುಖ್ಯಮಂತ್ರಿಗಳು ಇಂದು ಬೆಂಗಳೂರಿನಲ್ಲಿ ಚುರುಕಿನ ಚಟುವಟಿಕೆಗಳನ್ನು ನಡೆಸಿದ್ದಾರೆ.

ಬರ ಪರಿಸ್ಥಿತಿ ಅವಲೋಕನಕ್ಕೆ ಇಂದೇ ತುರ್ತು ಕ್ಯಾಬಿನೆಟ್ ಸಭೆ : ದೆಹಲಿ ಪ್ರವಾಸದಲ್ಲಿದ್ದ ಕಾರಣ ಕಳೆದ ಗುರುವಾರ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮುಂದೂಡಲ್ಪಟ್ಟಿತ್ತು. ಹೀಗಾಗಿ ಇಂದು ವಿಧಾನ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ಸಂಜೆ ತುರ್ತು ಕ್ಯಾಬಿನೆಟ್ ಸಭೆ ಕರೆದಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಒಗಳೊಂದಿಗೆ ಜೂಮ್ ಮೂಲಕ ಸಭೆ ನಡೆಸಿ ಮಾಹಿತಿ ಪಡೆದಿದ್ದೇವೆ. ಬರದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಿಂದ ಜನರು ಗುಳೆ (ವಲಸೆ) ಹೋಗುವುದು ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಚರ್ಚಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಂತರ ಕೇಂದ್ರದೊAದಿಗೂ ಚರ್ಚಿಸುತ್ತೇವೆ” ಎಂದರು.

ಕುಡಿಯುವ ನೀರಿಗೆ ಮಾತ್ರ ಆದ್ಯತೆ: ಜಲಾಶಯಗಳಲ್ಲಿ ನೀರಿನ ಅಭಾವ ಇರುವುದರಿಂದ ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನೀರು ಬಿಡಲಾಗಿದೆ. ರೈತರು ಯಾವುದೇ ಕಾರಣಕ್ಕೂ ವ್ಯವಸಾಯಕ್ಕೆ ನೀರು ಬಳಸಬಾರದು ಮತ್ತು ಆಮೇಲೆ ನಮ್ಮ ಮೇಲೆ ಒತ್ತಡ ತರಬಾರದು ಎಂದು ಸಿಎಂ ಕಟ್ಟುನಿಟ್ಟಿನ ಸಂದೇಶ ನೀಡಿದ್ದಾರೆ.

ನೆರೆರಾಜ್ಯಗಳ ಒತ್ತಡ: ತಮಿಳುನಾಡು ಹಾಗೂ ತುಂಗಭದ್ರಾ ಭಾಗದಿಂದ ನೀರಿಗಾಗಿ ಭಾರಿ ಒತ್ತಡವಿದೆ. ಆದರೆ ಡ್ಯಾಂ ಭರ್ತಿಯಾದರೆ ಮಾತ್ರ ನೀರು ಕೊಡಲು ಸಾಧ್ಯ. ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ನಾವು ನಮ್ಮ ಕೆಲಸ ಮಾಡುತ್ತೇವೆ. ಮೇಕೆದಾಟು ಯೋಜನೆ ತಮಿಳುನಾಡಿಗೂ ಹೆಲ್ಪ್ ಆಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ದೆಹಲಿ ಪ್ರವಾಸದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ? : ಒಂದೆಡೆ ಬರ ನಿವಾರಣೆಯ ಸವಾಲು ಸರ್ಕಾರದ ಮುಂದಿದ್ದರೆ, ಮತ್ತೊಂದೆಡೆ ದೆಹಲಿಯಲ್ಲಿ ಅಪೂರ್ಣಗೊಂಡಿದ್ದ ಸಂಪುಟ ವಿಸ್ತರಣೆಯ ಚರ್ಚೆಗಳು ಈಗ ಬೆಂಗಳೂರಿನಲ್ಲಿ ವೇಗ ಪಡೆದುಕೊಂಡಿವೆ. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರನ ಅನಾರೋಗ್ಯದ ಕಾರಣದಿಂದಾಗಿ ಚರ್ಚೆ ಅರ್ಧಕ್ಕೆ ನಿಂತು, ಖರ್ಗೆ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದರು.

ಹೀಗಾಗಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರಿನಲ್ಲೇ ಇರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಭೇಟಿಯಾಗಿದ್ದಾರೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು ‘ಖರ್ಗೆ ಅವರು ದೆಹಲಿಗೆ ಬಂದ ನಂತರ ಅವಶ್ಯಬಿದ್ದರೆ ಕರೆಯುತ್ತೇನೆ’ ಎಂದು ಹೇಳಿದ್ದ ಹಿನ್ನೆಲೆಯಲ್ಲಿ, ಸಂಪುಟ ವಿಸ್ತರಣೆಯ ಮುಹೂರ್ತ ಮುಂದಕ್ಕೆ ಹೋಗಿತ್ತು.

ಇಂದು ನಡೆದ ಭೇಟಿಯಲ್ಲಿ ಸಿಎಂ ಮತ್ತು ಡಿಸಿಎಂ ಇಬ್ಬರೂ, ರಾಹುಲ್ ಗಾಂಧಿ ಅವರೊಂದಿಗೆ ಆದಷ್ಟು ಬೇಗ ಮಾತನಾಡಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಮಾಡುವಂತೆ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ. ಖರ್ಗೆ ಅವರು ಭಾನುವಾರದ ನಂತರ ದೆಹಲಿಗೆ ತೆರಳಲಿದ್ದು, ಸೋಮವಾರ ಅಥವಾ ಮಂಗಳವಾರ ರಾಹುಲ್ ಗಾಂಧಿ ಅವರೊಂದಿಗೆ ಅಂತಿಮ ಚರ್ಚೆ ನಡೆಸಿ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ನೀಡುವ ಸಾಧ್ಯತೆ ದಟ್ಟವಾಗಿದೆ.

“ಕೇಂದ್ರಕ್ಕೆ ಬರ ಪರಿಹಾರದ ಕುರಿತು ಪತ್ರ ಬರೆದರೂ ಅವರು ತಕ್ಷಣ ಸ್ಪಂದಿಸುವುದಿಲ್ಲ ಎಂಬ ಅರಿವಿದೆ. ಆದರೂ ರಾಜ್ಯದ ಮಳೆ ಕೊರತೆಯ ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಭೀಕರ ಬರದ ಬೇಗೆಯಲ್ಲಿ ಬೆಂದಿರುವ ಜನರಿಗೆ ಕುಡಿಯುವ ನೀರು ಹಾಗೂ ಉದ್ಯೋಗ ಒದಗಿಸುವ ಆಡಳಿತಾತ್ಮಕ ತುರ್ತು ಒಂದೆಡೆಯಾದರೆ, ಹೈಕಮಾಂಡ್ ಒಪ್ಪಿಗೆ ಪಡೆದು ಸಚಿವ ಸಂಪುಟ ವಿಸ್ತರಿಸುವ ರಾಜಕೀಯ ಸವಾಲು ಮತ್ತೊಂದೆಡೆ ಎದುರಾಗಿದ್ದು, ಮುಖ್ಯಮಂತ್ರಿಗಳು ಇವೆರಡನ್ನೂ ಸಮತೋಲನಗೊಳಿಸುವ ಕಸರತ್ತಿನಲ್ಲಿದ್ದಾರೆ.

ಸಂಪುಟ ವಿಸ್ತರಣೆಗೆ ಶೀಘ್ರ ಇತೀಶ್ರೀ ಹಾಡಿ – ಸಿಎಂ, ಡಿಸಿಎಂ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳು ಅಪೂರ್ಣವಾಗಿರುವಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಇವರುಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರ ಪುತ್ರನ ಅನಾರೋಗ್ಯದ ಕಾರಣ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದರು. ಹಾಗಾಗಿ ಸಂಪುಟ ವಿಸ್ತರಣೆ ಚರ್ಚೆ ಅಪೂರ್ಣವಾಗಿತ್ತು. ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಅವರು ದೆಹಲಿಗೆ ಬಂದಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರ ಜತೆ ಒಂದು ಸುತ್ತಿನ ಚರ್ಚೆ ನಡೆಸಿ ಖರ್ಗೆ ಅವರು ದೆಹಲಿಗೆ ಬಂದ ನಂತರ ಅವಶ್ಯಬಿದ್ದರೆ ನಿಮ್ಮನ್ನು ಕರೆಯುತ್ತೇನೆ ಎಂದು ಹೇಳಿದ್ದರು. ಈ ಬೆಳವಗಣಿಗೆ ಹಿನ್ನೆಲೆಯಲ್ಲಿ ಸಂಪುಟು ವಿಸ್ತರಣೆ ಮಹೂರ್ತ ಮುಂದಕ್ಕೆ ಹೋಗಿತ್ತು. ಬೆಂಗಳೂರಿನಲ್ಲೇ ಇರುವ ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಬೆಳಗ್ಗೆ ಮುಖ್ಯಮಂತ್ರಿ ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಇವರುಗಳು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದರು. ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಅವರ ಜತೆ ಆದಷ್ಟು ಬೇಗ ಮಾತನಾಡಿ, ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿ ಮಾಡಿ ಎಂದು ಈ ಇಬ್ಬರೂ ನಾಯಕರು ಖರ್ಗೆಯವರಲ್ಲಿ ಮನವಿ ಮಾಡಿದರು.

 

Recent Articles

spot_img

Related Stories

Share via
Copy link