ಜಂತರ್ ಮಂತರ್‌ನಲ್ಲಿ ಹೋರಾಟದ ಕಿಚ್ಚು ತೀವ್ರ : ದೆಹಲಿಯಲ್ಲಿ ಕಟ್ಟೇಚ್ಚರ – ವ್ಯಾಪಕ ಭದ್ರತೆ : ಸಂಸದರ ಪ್ರತಿಭಟನೆ

ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ಕಿಚ್ಚು ಗಂಭೀರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಕೂಡ ಕಾಕ್ರೋಚ್ ಪಾರ್ಟಿ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಪ್ರಮುಖ ರೈಲ್ವೆ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು ಸೇರಿದಂತೆ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಪಕ್ಷ ಸಹ ವಿದ್ಯಾರ್ಥಿಗಳ ಪ್ರತಿಭಟನೆ ಬೆಂಬಲಿಸಿ ಸಂಸತ್ ಭವನದ ಮುಂದೆ ಪ್ರತಿಭಟನಾ ಧರಣಿ ನಡೆಸಿದ್ದು, ಕಾಂಗ್ರೆಸ್‌ನ ಸಂಸದರ ಕಪುö್ಪ ವಸ್ತç ಧರಿಸಿ, ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳ ಈ ಸುದೀರ್ಘ ಹೋರಾಟವು ದೇಶದ ರಾಜಧಾನಿ ದೆಹಲಿಯಲ್ಲಿ ಅತ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಮಾಡಿದೆ. ಸಂಸತ್ ಚಲೋ ಮೆರವಣಿಗೆಯ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಭವಿಸಿದ ತೀವ್ರ ಘರ್ಷಣೆಯಲ್ಲಿ ೧೧೮ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಉಳಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ೨೦ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂಗೊAಡ ಹಿನ್ನೆಲೆಯಲ್ಲಿ, ನವದೆಹಲಿ ವ್ಯಾಪ್ತಿಯಲ್ಲಿ ಅಭೂತಪೂರ್ವ ಭದ್ರತಾ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇತರ ರಾಜ್ಯಗಳಿಂದ ದೆಹಲಿಗೆ ಪ್ರತಿಭಟನಾಕಾರರು ಸಾಲಾಗಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನವದೆಹಲಿ, ದೆಹಲಿ ಕ್ಯಾಂಟ್, ಆನಂದ್ ವಿಹಾರ್, ಹಜರತ್ ನಿಜಾಮುದ್ದೀನ್ ಮತ್ತು ಹಳೆಯ ದೆಹಲಿ ರೈಲ್ವೆ ನಿಲ್ದಾಣಗಳಲ್ಲಿ ದೆಹಲಿ ಪೊಲೀಸರು ಹಾಗೂ ರೈಲ್ವೆ ಸುರಕ್ಷತಾ ಪಡೆ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿವೆ. ರೈಲುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಂಡುಬAದರೆ ತಕ್ಷಣವೇ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಇದರ ಜೊತೆಗೆ ಜಂತರ್ ಮಂತರ್ ತಲುಪುವ ಮಾರ್ಗಗಳಾದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್, ಪಟೇಲ್ ಚೌಕ್ ಮತ್ತು ಬಾರಾಖಂಬಾ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

ದೆಹಲಿಯ ಕಾನೂನು ಮತ್ತು ಸುವ್ಯವಸ್ಥೆ ಕೈತಪ್ಪದಂತೆ ತಡೆಯಲು ಕೇಂದ್ರ ಗೃಹ ಸಚಿವಾಲಯವು ತುರ್ತು ಕ್ರಮ ಕೈಗೊಂಡಿದೆ. ಪಶ್ಚಿಮ ಬಂಗಾಳದಲ್ಲಿದ್ದ ಕೇಂದ್ರ ಸಶಸ್ತç ಪೊಲೀಸ್ ಪಡೆಯ ೨೦ ಹೆಚ್ಚುವರಿ ಕಂಪನಿಗಳನ್ನು (ಸುಮಾರು ೨,೦೦೦ಕ್ಕೂ ಹೆಚ್ಚು ಸೈನಿಕರು) ವಿಶೇಷ ವಿಮಾನಗಳ ಮೂಲಕ ತಕ್ಷಣವೇ ದೆಹಲಿಗೆ ಕರೆಸಿಕೊಂಡು ಸೂಕ್ಷ÷್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.
ಜುಲೈ ೨೧ರ ಮಂಗಳವಾರದAದು ನವದೆಹಲಿಯಲ್ಲಿ ರಾಜಕೀಯ ಹೈಡ್ರಾಮಾ ನಡೆದಿದೆ. ಜುಲೈ ೨೦ರಂದು ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಅಧಿಕೃತ ನಿವಾಸದ ಹೊರಭಾಗದಲ್ಲಿ ಧರಣಿ ಕುಳಿತರು. ಪೊಲೀಸರು ತಕ್ಷಣವೇ ಇವರನ್ನು ವಶಕ್ಕೆ ಪಡೆದು, ಸಂಜೆ ವೇಳೆಗೆ ಬಿಡುಗಡೆ ಮಾಡಿದರು.

ಬುಧವಾರ ಬೆಳಿಗ್ಗೆ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದAತೆ, ಇಂಡಿಯಾ ಕೂಟದ ಸಂಸದರು ಸಂಸತ್ತಿನ ಆವರಣದ ಮಕರ ದ್ವಾರದ ಬಳಿ ಕಪುö್ಪ ಉಡುಪು ಧರಿಸಿ ಭಾರಿ ಪ್ರತಿಭಟನೆ ನಡೆಸಿದರು. ಲೋಕಸಭೆಯಲ್ಲಿ ನೀಟ್ ಅಕ್ರಮಗಳ ಕುರಿತು ತಕ್ಷಣವೇ ಚರ್ಚೆಗೆ ಅವಕಾಶ ನೀಡಬೇಕು ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಘೋಷಣೆಗಳನ್ನು ಕೂಗಿದರು. ದೆಹಲಿ ಪೊಲೀಸರು ಈವರೆಗೆ ಪ್ರತಿಭಟನೆಗೆ ಸಂಬAಧಿಸಿದAತೆ ೧೦ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಪಾರ್ಲಿಮೆಂಟ್ ಸ್ಟಿçÃಟ್ (೪), ಕನೆಕ್ಟ್ ಪ್ಲೇಸ್ (೩), ಮಂದಿರ ಮಾರ್ಗ (೧), ಬಾರಾಖಂಬಾ ರಸ್ತೆ (೧) ಮತ್ತು ಕರ್ತವ್ಯ ಪಥ (೧) ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಭದ್ರತೆಯಲ್ಲಿದ್ದ ರ‍್ಯಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿಯ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ ವೀಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಮತ್ತೊಂದು ಕಟ್ಟುನಿಟ್ಟಿನ ಎಫ್‌ಐಆರ್ ದಾಖಲಿಸಲಾಗಿದೆ.

ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ ಜುಲೈ ೨೦ರಂದು ನಡೆದದ್ದು ಕೇವಲ ಟ್ರೇಲರ್ ಅಷ್ಟೇ. ಸರ್ಕಾರ ತಕ್ಷಣವೇ ನೀಟ್ ಅಕ್ರಮಗಳ ಕುರಿತು ಕ್ರಮ ಕೈಗೊಳ್ಳದಿದ್ದರೆ ಮತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡದಿದ್ದರೆ ದೇಶದಾದ್ಯಂತ ಇರುವ ಕೋಟ್ಯಂತರ ಯುವಕರು ದೆಹಲಿಗೆ ಆಗಮಿಸಲಿದ್ದಾರೆ. ನಾವು ಈ ಬಾರಿ ಸುಮ್ಮನೆ ಹಿಂತಿರುಗುವುದಿಲ್ಲ.

ಸಿಜೆಪಿ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯ : ಕೇಂದ್ರ, ಪೊಲೀಸರಿಗೆ ಹೈಕೋರ್ಟ್ ನೋಟಿಸ್
ಜು.೨೦ರ ಸೋಮವಾರದಂದು ಸಂಸತ್ ಚಲೋ ಚಳವಳಿ ಹಮ್ಮಿಕೊಂಡಿದ್ದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಅತಿಯಾದ ಬಲಪ್ರಯೋಗ ಹಾಗೂ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬAಧಿಸಿದAತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದ್ದು, ಮುಂದಿನ ನಾಲ್ಕು ವಾರಗಳ ಒಳಗಾಗಿ ಪ್ರತಿಪ್ರಮಾಣಪತ್ರ (ಕೌಂಟರ್ ಅಫಿಡವಿಟ್) ಸಲ್ಲಿಸುವಂತೆ ಕೇಂದ್ರ ಸರ್ಕಾರ ಮತ್ತು ಪೊಲೀಸರಿಗೆ ಸೂಚಿಸಿದೆ. ಉಳಿದಂತೆ ಘಟನೆಗೆ ಸಂಬAಧಿಸಿದ ಸಿಸಿಟಿವಿ ದೃಶ್ಯಾವಳಿಗಳು, ವಿಡಿಯೋ ರೆಕಾರ್ಡಿಂಗ್‌ಗಳು ಮತ್ತು ಬಾಡಿ ಕ್ಯಾಮೆರಾ ದೃಶ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸಿಡಲು ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ೧೧ಕ್ಕೆ ಕಾಯ್ದಿರಿಸಲಾಗಿದೆ.

ನೀಟ್ ಅಕ್ರಮಕ್ಕೆ ಸಂಬAಧಿಸಿದAತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರು ರಾಜೀನಾಮೆ ನೀಡುವವರೆಗೂ ರಾಜ್ಯಸಭೆಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಚರ್ಚೆಗಳನ್ನು ನಡೆಸದಿರಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನಖರ್ಗೆ ಅವರು ಇಂದು ಬೆಳಗ್ಗೆ ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟçಪತಿ ರಾಧಾಕೃಷ್ಣ ಅವರನ್ನು ಭೇಟಿ ಮಾಡಿ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವವರೆಗೂ ಸದನದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬAಧ ಚರ್ಚೆಗಳನ್ನು ನಡೆಸುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ರಾಜ್ಯಸಭೆಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬAಧ ಇಂದು ಚರ್ಚೆಗಳು ನಡೆಯಬೇಕಿತ್ತು .ಆದರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವರೆಗೂ ಚರ್ಚೆಗಳು ನಡೆಸಲ್ಲ ಎಂದು ಮಲ್ಲಿಕಾರ್ಜುನಖರ್ಗೆ ರಾಜ್ಯಸಭೆ ಸಭಾಪತಿ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಜಂತರ್ ಮಂತರ್‌ನಲ್ಲಿ ೩೨ನೇ ದಿನಕ್ಕೆ ಕಾಲಿಟ್ಟ ಸಿಜೆಪಿ ಪ್ರತಿಭಟನೆ
ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷ ನಾಯಕರ ಬಂಧನ, ಬಿಡುಗಡೆ
ಸಿಆರ್‌ಪಿಎಫ್‌ನ ೨೦ ಹೆಚ್ಚುವರಿ ತುಕಡಿ ನಿಯೋಜನೆ
ಪ್ರಧಾನ್ ರಾಜೀನಾಮೆ ನೀಡಿದರಷ್ಟೆ ಚರ್ಚೆ

 

ಕಪಟ ವ್ಯವಸ್ಥೆಯಾದ ಶಿಕ್ಷಣ ವ್ಯವಸ್ಥೆ : ರಾಹುಲ್

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭದ್ರತಾ ಪಡೆಗಳು ತಮ್ಮ ಮೇಲೆ ಶಸ್ತಾçಸ್ತçಗಳನ್ನು ಗುರಿಯಿಟ್ಟು ಹೊಡೆಯುವಂತೆ ಮಾಡಲು ನಮ್ಮ ವಿದ್ಯಾರ್ಥಿಗಳು ಏನು ತಪುö್ಪ ಮಾಡಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ವಿಶ್ವದಲ್ಲೇ ಅತ್ಯುತ್ತಮ ಎಂದು ಹೆಸರಾಗಿದ್ದ ನಮ್ಮ ಶಿಕ್ಷಣ ವ್ಯವಸ್ಥೆ ಇಂದು ಒಂದು ಕಪಟ ವ್ಯವಸ್ಥೆಯಂತಾಗಿದೆ. ಭಾರತದ ಯುವಕರಿಗೆ ಭವಿಷ್ಯವಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ . ನ್ಯಾಯಯುತ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಬೇಕು. ಪ್ರಧಾನಿ ಮೋದಿ ಅವರು ಈ ಘಟನೆಗೆ ಸಂಬAಧಿಸಿದAತೆ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸುವ ಸಭ್ಯತೆ ತೋರಬೇಕು ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿAದ ವಜಾ ಮಾಡಬೇಕು. ಅವರು ಆ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕರು ಆರೋಪಿಸಿದ್ದಾರೆ. ನಾವು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಬೆಂಬಲಿಸುತ್ತೇವೆ, ಅವರ ಬೇಡಿಕೆಗಳು ಈಡೇರಬೇಕು. ಕಳೆದ ೧೦ ವರ್ಷದಲ್ಲಿ ೧೫೨ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ೭.೫ ಕೋಟಿ ವಿದ್ಯಾರ್ಥಿಗಳ ಮೇಲೆ ಇದು ಪರಿಣಾಮ ಬೀರಿದೆ. ಕಳೆದ ೧೦ ವರ್ಷಗಳಲ್ಲಿ ತಪ್ಪಿತಸ್ಥರಿಗೆ ಯಾವುದೇ ಶಿಕ್ಷೆ ಆಗಿಲ್ಲ ಎಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link