
ಬೆಂಗಳೂರು: ಭಾನುವಾರ ನಡೆದ 3,991 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಒತ್ತಾಯ ಹಿನ್ನೆಲೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮೊದಲು 25 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಲಿ. ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಲಾಠಿ ಚಾರ್ಜ್ ಮಾಡುತ್ತೇವೆ. ಆನಂತರ ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ವಿಜಯಪುರ ತಿಕೋಟಾದ ಶ್ರೀ ಶಾರದಾಂಬ ಶೈಕ್ಷಣಿಕ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್ ವಿತರಣೆ ವೇಳೆ ವ್ಯತ್ಯಾಸವಾಗಿದೆ ಎಂದು ಆಭ್ಯರ್ಥಿಗಳು ಆರೋಪಿಸಿ ಪರೀಕ್ಷಾ ಕೇಂದ್ರದಿAದ ಹೊರಬಂದು ಪ್ರತಿಭಟನೆ ನಡೆಸಿದ್ದರು. ವಿಜಯಪುರ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಪರೀಕ್ಷಾ ಲೋಪವಾಗಿದೆ ಎಂದು ಆಪಾದಿಸಿ ಪ್ರತಿಪಕ್ಷದ ನಾಯಕ ಆರ್. ಆಶೋಕ್, ಅಭ್ಯರ್ಥಿಗಳು ಪರೀಕ್ಷೆಯಿಂದ ಹೊರನಡೆಯುವಂತಾದ ಘಟನೆ ಆಡಳಿತದ ಸಂಪೂರ್ಣ ವೈಫಲ್ಯ ಮತ್ತು ಕ್ಷಮಿಸಲಾಗದ ನಿರ್ಲಕ್ಷ÷್ಯಕ್ಕೆ ಹಿಡಿದ ಕೈಗನ್ನಡಿ. ಈ ವೈಫಲ್ಯದ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ದರು.
ಸೋಮವಾರ ಸದಾಶಿವನಗರದ ನಿವಾಸದ ಮುಂದೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಖರ್ಗೆ, ವಿಜಯಪುರ ತಿಕೋಟಾದ ಪರೀಕ್ಷಾ ಕೇಂದ್ರವೊAದರಲ್ಲಿ ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್ ವಿತರಣೆಯಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಕೆಲ ಅಭ್ಯರ್ಥಿಗಳು ಕೇಂದ್ರದಿAದ ಹೊರಬಂದು ವಿರೋಧಿಸಿದರು. ನೂರಾರು ಮಂದಿ ಪ್ರತಿಭಟನೆ ನಡೆಸಿದರು. ಒಮ್ಮೆ ಪರೀಕ್ಷಾ ಕೇಂದ್ರದಿAದ ಹೊರ ಹೋದರೆ ಮತ್ತೆ ಪ್ರವೇಶ ನಿಷೇಧವಿದ್ದರೂ ಪ್ರತಿಭಟಿಸಿರುವುದು ನಿಯಮಬಾಹಿರ. ಪರೀಕ್ಷೆ ಬರೆದ ಬಳಿಕ ಆಗಿರುವ ಲೋಪದ ಬಗ್ಗೆ ಗಮನ ಸೆಳೆಯಬಹುದಿತ್ತು ಎಂದರು.
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಅಕ್ರಮ ನಡೆದಿದ್ದು, ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿ, ಮೊದಲು ಅವರು 25 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಲಿ. ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಲಾಠಿ ಜಾರ್ಜ್ ಮಾಡಿಸೋಣ. ಅನಂತರವಷ್ಟೇ ರಾಜೀನಾಮೆ ಕೊಡುತ್ತೇನೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆ ನಡೆದ ರೀತಿ ಮಾಡಲಿ. ಬಿಜೆಪಿ ಸರ್ಕಾರ ಇದ್ದಾಗ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲವೇ? ಆಗ ಯಾಕೆ ಬಸವರಾಜ ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಲಿಲ್ಲ. ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಲಿಲ್ಲವೇ? ಎಂದು ಪ್ರಶ್ನಿಸಿದರು.








