ಮುಖ್ಯಮಂತ್ರಿ ಡಿಕೆಶಿ-ಗೌತಮ್ ಅದಾನಿ ಭೇಟಿ ಕೌತುಕ

ಬೆಂಗಳೂರು : ಸಿಲಿಕಾನ್ ಸಿಟಿಯ ಭೀಕರ ಸಂಚಾರ ದಟ್ಟಣೆಗೆ ಶಾಶ್ವತ ಮುಕ್ತಿ ನೀಡಲು ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷೆಯ ‘ಬೆಂಗಳೂರು ಸುರಂಗ ರಸ್ತೆ’ ಯೋಜನೆಯ ಗುತ್ತಿಗೆ ಹಂಚಿಕೆ ಪ್ರಕ್ರಿಯೆ ನಿರ್ಣಾಯಕ ಹಂತ ತಲುಪಿದೆ. ಈ ಬೆಳವಣಿಗೆಯ ನಡುವೆಯೇ, ದೇಶದ ಖ್ಯಾತ ಉದ್ಯಮಿ ಹಾಗೂ ಅದಾನಿ ಎಂಟರ್‌ಪ್ರೆಸಸ್ ಛೇರ್ಮನ್ ಗೌತಮ್ ಅದಾನಿ ಅವರು ಭಾನುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ನಡೆಸಿರುವ ಮಾತುಕತೆ ರಾಜಕೀಯ ಹಾಗೂ ವಾಣಿಜ್ಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಕನಕಪುರದಲ್ಲಿರುವ ಶ್ರೀ ರವಿಶಂಕರ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ್ದ ಗೌತಮ್ ಅದಾನಿ, ಅಲ್ಲಿಂದ ವಾಪಸ್ ತೆರಳುವಾಗ ಸದಾಶಿವನಗರದಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದರು. ಸುಮಾರು 20 ನಿಮಿಷಗಳ ಕಾಲ ಸಿಎಂ ಜೊತೆ ನಡೆಸಿದ ಚರ್ಚೆಯ ಅಧಿಕೃತ ವಿವರಗಳು ಹೊರಬಿದ್ದಿಲ್ಲವಾದರೂ, ರಾಜ್ಯದಲ್ಲಿನ ಹೂಡಿಕೆ ಅವಕಾಶಗಳು ಹಾಗೂ ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆಯ ಗುತ್ತಿಗೆ ಪ್ರಕ್ರಿಯೆಗೆ ಸಂಬAಧಿಸಿದAತೆ ಮಹತ್ವದ ಮಾತುಕತೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಈ ಬೃಹತ್ ಯೋಜನೆಗೆ ಟೆಂಡರ್ ಕರೆಯಲಾಗಿತ್ತು. ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಗೌತಮ್ ಅದಾನಿ ನೇತೃತ್ವದ ಅದಾನಿ ಎಂಟರ್‌ಪ್ರೆಸಸ್ ಲಿಮಿಟೆಡ್ ಅತ್ಯಂತ ಕಡಿಮೆ ಮೊತ್ತವನ್ನು ನಮೂದಿಸುವ ಮೂಲಕ ಗುತ್ತಿಗೆ ಪಡೆಯುವ ಓಟದಲ್ಲಿ ಮುಂಚೂಣಿಯಲ್ಲಿದೆ.

ಆದರೆ, ರಾಜ್ಯ ಸರ್ಕಾರ ಮತ್ತು ಯೋಜನೆಯ ಉಸ್ತುವಾರಿ ಹೊತ್ತಿರುವ ಬಿ-ಸ್ಮೆಲ್ ಸಂಸ್ಥೆಯ ಮೂಲ ಅಂದಾಜು ಮೊತ್ತಕ್ಕಿಂತ ಅದಾನಿ ಸಂಸ್ಥೆ ನಮೂದಿಸಿರುವ ಮೊತ್ತವು ಬರೋಬ್ಬರಿ 4,569 ಕೋಟಿ ಅಧಿಕವಾಗಿದೆ. ಟೆಂಡರ್ ಮೊತ್ತದಲ್ಲಿ ಈ ಭಾರಿ ಪ್ರಮಾಣದ ಏರಿಕೆಯಾಗಿರುವುದರಿಂದ ಅಂತಿಮ ತೀರ್ಮಾನ ಕೈಗೊಳ್ಳಲು ಬಿ-ಸ್ಮೆöÊಲ್ ಸಂಸ್ಥೆಯು ಕಡತವನ್ನು ರಾಜ್ಯ ಸಚಿವ ಸಂಪುಟದ ಮುಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ಅದಾನಿ ಮತ್ತು ಸಿಎಂ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷೆಯ ಬೆಂಗಳೂರು ಸುರಂಗ ರಸ್ತೆ ಯೋಜನೆ ಈಗ ಹೊಸ ತಿರುವು ಪಡೆದುಕೊಂಡಿದೆ. ಈ ಬೃಹತ್ ಯೋಜನೆಗೆ ಖ್ಯಾತ ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಎಂಟರ್‌ಪ್ರೆಸಸ್ ಅತ್ಯಂತ ಕಡಿಮೆ ಮೊತ್ತದ ಬಿಡ್ ಸಲ್ಲಿಸಿ ಮುಂಚೂಣಿಯಲ್ಲಿದೆ.ಆದರೆ, ರಾಜ್ಯ ಸರ್ಕಾರದ ಅಂದಾಜು ವೆಚ್ಚಕ್ಕಿಂತ ಬಿಡ್ ಮೊತ್ತ ಹೆಚ್ಚಿರುವ ಕಾರಣ ಟೆಂಡರ್ ಅಂತಿಮಗೊಳಿಸುವುದು ತಡವಾಗುತ್ತಿದೆ. ಹೀಗಾಗಿ ಸ್ವತಃ ಗೌತಮ್ ಅದಾನಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ತೀವ್ರ ರಾಜಕೀಯ ಹಾಗೂ ವಾಣಿಜ್ಯ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸರ್ಕಾರ ಅಂದಾಜು 17,698 ಕೋಟಿ ವೆಚ್ಚ ನಿಗದಿಪಡಿಸಿತ್ತು. ಆದರೆ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್‌ಪ್ರೆಸಸ್ ಲಿಮಿಟೆಡ್ ಸಂಸ್ಥೆಯು 22,267 ಕೋಟಿ ರೂ. ಮೊತ್ತವನ್ನು ನಮೂದಿಸಿ ಅತಿ ಕಡಿಮೆ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ. ಸರ್ಕಾರದ ಅಂದಾಜು ಮೊತ್ತಕ್ಕಿಂತ ಇದು ಹೆಚ್ಚಾಗಿದ್ದರೂ, ಬಿಡ್ಡಿಂಗ್‌ನಲ್ಲಿ ಭಾಗವಹಿಸಿದ್ದ ಇತರೆ ಸಂಸ್ಥೆಗಳಿಗೆ ಹೋಲಿಸಿದರೆ ಅದಾನಿ ಸಂಸ್ಥೆಯ ಮೊತ್ತವೇ ಕಡಿಮೆಯಾಗಿದೆ.

ಟೆಂಡರ್ ಅಂತಿಮಗೊಳ್ಳುವ ಮುನ್ನವೇ ಸಂಸ್ಥೆಯು ಸುರಂಗ ಮಾರ್ಗ ಹಾದುಹೋಗುವ ಸ್ಥಳಗಳಲ್ಲಿ ಅಗತ್ಯವಿರುವ ಪ್ರಾಥಮಿಕ ಭೂ ಸಮೀಕ್ಷೆ ಹಾಗೂ ಮಣ್ಣಿನ ಗುಣಮಟ್ಟ ಪರೀಕ್ಷೆ ಸೇರಿದಂತೆ ಪ್ರಮುಖ ತಾಂತ್ರಿಕ ಪರೀಕ್ಷೆಗಳನ್ನು ಈಗಾಗಲೇ ಪೂರ್ಣಗೊಳಿಸಿದೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿರುವ ಈ ಯೋಜನೆಗೆ ಅದಾನಿ ಗ್ರೂಪ್ ಸುಮಾರು 22,267 ಕೋಟಿ ರೂಪಾಯಿಗಳ ಬಿಡ್ ಸಲ್ಲಿಸಿದೆ. ತಾಂತ್ರಿಕವಾಗಿ ಅದಾನಿ ಸಂಸ್ಥೆ ಅತ್ಯಂತ ಕಡಿಮೆ ಮೊತ್ತ ನಮೂದಿಸಿದ(ಐ1)ಗುತ್ತಿಗೆದಾರ ಸಂಸ್ಥೆಯಾಗಿ ಹೊರಹೊಮ್ಮಿದೆ.

ಆದರೆ, ರಾಜ್ಯ ಸರ್ಕಾರ ಮತ್ತು ಯೋಜನೆಯ ಉಸ್ತುವಾರಿ ಹೊತ್ತಿರುವ ಬಿ-ಸ್ಮೆಲ್ ಸಂಸ್ಥೆಯ ಮೂಲ ಅಂದಾಜು ವೆಚ್ಚ ಸುಮಾರು 17,698 ಕೋಟಿ ರೂಪಾಯಿಗಳಷ್ಟಿತ್ತು.ಸರ್ಕಾರದ ನಿರೀಕ್ಷೆಗಿಂತ ಅದಾನಿ ಗ್ರೂಪ್ ಕೋಟ್ ಮಾಡಿರುವ ಮೊತ್ತವು ಸುಮಾರು 4,569 ಕೋಟಿ ಅಧಿಕವಾಗಿದೆ.ಹೀಗಾಗಿ ಅಧಿಕೃತವಾಗಿ ಗುತ್ತಿಗೆಯನ್ನು ಇನ್ನೂ ಅದಾನಿ ಸಂಸ್ಥೆಗೆ ಹಸ್ತಾಂತರಿಸಲಾಗಿಲ್ಲ.

ಟೆ0ಡರ್ ವೆಚ್ಚದಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿರುವುದರಿಂದ,ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಬಿ-ಸ್ಮೆಲ್ ಸಂಸ್ಥೆಯು ಫೈಲ್ ಅನ್ನು ರಾಜ್ಯ ಸಚಿವ ಸಂಪುಟದ ಅಂಗಳಕ್ಕೆ ತಳ್ಳಿದೆ.

ಅದಾನಿ ಸಂಸ್ಥೆಯು ಗುತ್ತಿಗೆ ಪ್ರಸ್ತಾವನೆಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದ್ದು, ಅಧಿಕೃತವಾಗಿ ಕಾಮಗಾರಿ ವಹಿಸುವ ಸಂಬAಧ ಮಾತುಕತೆಗಳು ನಡೆಯುತ್ತಿವೆ. ವೆಚ್ಚ ಹೆಚ್ಚಳಕ್ಕೆ ಸಂಬAಧಿಸಿದAತೆ ರಾಜ್ಯ ಸಚಿವ ಸಂಪುಟದ ಅಂತಿಮ ಅನುಮೋದನೆ ಪಡೆಯಬೇಕಿರುವ ಹಿನ್ನೆಲೆಯಲ್ಲಿ, ಗೌತಮ್ ಅದಾನಿ ಈ ಭೇಟಿ ಮತ್ತು ಚರ್ಚೆ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯೋಜನೆ ವಿವರ – ವೆಚ್ಚದ ಅಂತರ

ವಿವರ – ಮೊತ್ತ / ಮಾಹಿತಿ

ಯೋಜನಾ ಮಾರ್ಗ – ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ (ಸುಮಾರು 17 ಕಿ.ಮೀ.)

ಸರ್ಕಾರದ ಅಂದಾಜು ವೆಚ್ಚ – 17,698 ಕೋಟಿ

ಅದಾನಿ ಗ್ರೂಪ್ ಬಿಡ್ ಮೊತ್ತ – 22,267 ಕೋಟಿ

ಹೆಚ್ಚುವರಿ ಅಂತರದ ಮೊತ್ತ – 4,569 ಕೋಟಿ

 

ಉದ್ಯಮಿ ಅದಾನಿ: ಸೌಜನ್ಯದ ಭೇಟಿ

ಉದ್ಯಮಿ ಗೌತಮ್ ಅದಾನಿಯವರು ಮುಖ್ಯಮಂತ್ರಿಗಳನ್ನು ಭೇಟಿಯಾದ ಬಗ್ಗೆ ಮಾಧ್ಯದವರಿಗೆ ಪ್ರತಿಕ್ರಿಯೆ ನೀಡಿ ಡಿ.ಕೆ.ಶಿವಕುಮಾರ್ ಅವರು, ನಾನು ಮುಖ್ಯಮಂತ್ರಿಯಾದ ನಂತರ ಉದ್ಯಮಿ ಗೌತಮ್ ಅದಾನಿಯವರು ಸೌಜನ್ಯದ ಭೇಟಿ ನೀಡಿ ಮಾತುಕತೆ ನಡೆಸಿದರು ಎಂದರು.

 

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ಅನ್ನು ಎದುರಿಸಲು ಶಕ್ತಿಯಿಲ್ಲ- ಸಿಎಂ ಡಿ.ಕೆ.ಶಿವಕುಮಾರ್

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ. ಸಚಿವ ನಾಗೇಂದ್ರ ಅವರ ರಾಜಿನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ?ಇಲ್ಲಿ ನೆಲದ ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸಲು ಅವಕಾಶವಿದೆ. ಇಂದು ಅವರು ಗೂಂಡಾಗಿರಿ ಮಾಡುತ್ತಿದ್ದಾರೆ. ಒಂದು ನೋಟೀಸ್ ಕೂಡ ಕೊಡದೇ ಅಧಿವೇಶನದ ಕಾರ್ಯಕಲಾಪಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಧರಣಿ ಮಾಡುವುದು ತಪ್ಪಲ್ಲ. ಆದರೆ ನೋಟೀಸು ನೀಡಿ ಚರ್ಚೆ ನಡೆಸಲಿ. ಸಚಿವರ ರಾಜಿನಾಮೆ ಏಕೆ ನೀಡಬೇಕು ಎಂಬುದನ್ನು ಚರ್ಚೆ ಮಾಡಲು ಪ್ರತಿಪಕ್ಷಗಳಿಗೆ ತಾಳ್ಮೆ ಇಲ್ಲ ಎಂದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

 

ದೇಶದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ತಿಳಿಸಲಿ

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ?.? ಮಾಧ್ಯಮದವರು ದೇಶದ ಯಾವ ಸಚಿವರ ಹಾಗೂ ಯಾವ ಮುಖ್ಯಮಂತ್ರಿಗಳ ಮೇಲೆ ಎಷ್ಟು ಮೊಕದ್ದಮೆಗಳಿವೆ ಎಂಬ ದಾಖಲಾತಿಗಳೊಂದಿಗೆ ಪ್ರಶ್ನಿಸಬೇಕು. ಪ್ರತಿಪಕ್ಷಗಳು ಅಂತಹ ಎಷ್ಟು ಸಚಿವರ ಹಾಗೂ ಮುಖ್ಯಮಂತ್ರಿಗಳ ರಾಜಿನಾಮೆಯನ್ನು ಕೇಳುತ್ತಿದ್ದಾರೆ ಎಂಬುದನ್ನು ಮಾಧ್ಯಮಗಳೂ ಪರಿಶೀಲಿಸಬೇಕು. ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 15 ಪರಿಶಿಷ್ಟ ವರ್ಗದ ಶಾಸಕರು ಆಯ್ಕೆಯಾಗಿದ್ದು , ಈ ಬಗ್ಗೆ ಅವರಿಗೆ ಮತ್ಸರವಿದೆ. ಅವರ ಪಕ್ಷದಲ್ಲಿ ಯಾವುದೇ ಪರಿಶಿಷ್ಟ ವರ್ಗದ ನಾಯಕರು ಹೊರಹೊಮ್ಮಲಿಲ್ಲ ಎಂಬ ಅಸಮಾಧಾನವಿರುವ ಕಾರಣ, ಈ ರೀತಿಯ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಸಿಎಂ ಹೇಳಿದರು.

Recent Articles

spot_img

Related Stories

Share via
Copy link