ಸಚಿವ ಡಿ. ಸುಧಾಕರ್ ಗೆ ಶ್ವಾಸಕೋಶದ ಸೋಂಕು: ಮುಂದುವರೆದ ಚಿಕಿತ್ಸೆ

ಬೆಂಗಳೂರು : ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಶ್ವಾಸಕೋಶದ ಸೋಂಕಿನಿAದಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಕಿಮ್ಸ್ ಪ್ರಕಟಣೆ ಹೊರಡಿಸಿದ್ದು, ಸಚಿವ ಡಿ. ಸುಧಾಕರ್ ಅವರನ್ನು ಶ್ವಾಸಕೋಶದ ಸೋಂಕಿನಿAದ ನಮ್ಮ ಕಿಮ್ಸ್ ಎಲೆಕ್ಟಾçನಿಕ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದೆ.

ನುರಿತ ವೈದ್ಯರ ತಂಡವು ಸಚಿವರ ಆರೋಗ್ಯದ ಮೇಲೆ 24 ಗಂಟೆಗಳ ಕಾಲ ನಿರಂತರ ನಿಗಾ ಇರಿಸಿದೆ. ವೈದ್ಯರು ಶ್ವಾಸಕೋಶ ಕಸಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಡಾ.ವೆಂಕಟಗಿರಿ ನೇತೃತ್ವದಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಡಿ. ಸುಧಾಕರ್ 2004ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಳ್ಳಕೆರೆ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದರು. ಬಳಿಕ 2008ರಲ್ಲಿ ಚಳ್ಳಕೆರೆ ಕ್ಷೇತ್ರವು ಮೀಸಲು ಕ್ಷೇತ್ರವಾದ ಕಾರಣ ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದರು.

2013ರಲ್ಲಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದಿಂದ ಮರು ಆಯ್ಕೆಯಾದರು. 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹಿರಿಯೂರು ಕ್ಷೇತ್ರದಿಂದ ಮತ್ತೊಮ್ಮೆ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದರು.

ಈ ಬಗ್ಗೆ ಕಿಮ್ಸ್ ಪ್ರಕಟಣೆ ಹೊರಡಿಸಿದ್ದು, ಸಚಿವ ಡಿ. ಸುಧಾಕರ್ ಅವರನ್ನು ಶ್ವಾಸಕೋಶದ ಸೋಂಕಿನಿAದ ನಮ್ಮ ಕಿಮ್ಸ್ ಎಲೆಕ್ಟಾçನಿಕ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದೆ.

Recent Articles

spot_img

Related Stories

Share via
Copy link