ಬಳ್ಳಾರಿ ಚಲೋ: ಬಿಜೆಪಿ ರಣಕಹಳೆ

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪ್ರತಿಪಕ್ಷವಾದ ಬಿಜೆಪಿ ಹೋರಾಟದ ರಣಕಹಳೆ ಮೊಳಗಿಸಿದೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆಗೆ ಚಾಲನೆ ನೀಡುವ ಮೂಲಕ ಬಿಜೆಪಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಗುರುಗುಂಟಾದ ಲಿಂಗಸುಗೂರು-ಬೆ0ಗಳೂರು ಬೈಪಾಸ್ ರಸ್ತೆಯಲ್ಲಿರುವ ಜಿ.ಕೆ. ರೆಸಿಡೆನ್ಸಿ ಮೈದಾನದಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರು, ಶಾಸಕರು, ಸಂಸದರು ಬಳ್ಳಾರಿ ಚಲೋ ಪಾದಯಾತ್ರೆ ಉದ್ಘಾಟನಾ ಸಮಾವೇಶವನ್ನು ಕಹಳೆ ಮೊಳಗಿಸುವ ಮೂಲಕ ಉದ್ಘಾಟಿಸಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪ ತೊಟ್ಟರು.
ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಲ್ಲಿ ತೊಡಗಿದೆ, ಜನ ವಿರೋಧಿ, ದಲಿತ ವಿರೋಧಿ, ಅಭಿವೃದ್ಧಿ ವಿರೋಧಿಯಾಗಿರುವ ಈ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ಬಿಜೆಪಿಯ ಹೋರಾಟ ನಿಲ್ಲಲ್ಲ ಎಂದು ಗುಡುಗಿದ ಬಿಜೆಪಿ ನಾಯಕರು, ಮತ್ತೆ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರವನ್ನು ಅಧಿಕಾರಕ್ಕೆ ತರುವ ಶಪಥ ಕೈಗೊಂಡರು.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದಿನಿAದ ಸೆ. 10ರ ವರೆಗೂ ಬಳ್ಳಾರಿ ಚಲೋ ಪಾದಯಾತ್ರೆ ನಡೆಯಲಿದ್ದು, ಒಟ್ಟು 170 ಕಿ.ಮೀ. ಕ್ರಮಿಸುವ ಈ ಪಾದಯಾತ್ರೆ ಸುಮಾರು 9 ವಿಧಾನಸಭಾ ಕ್ಷೇತ್ರಗಳಲ್ಲಿ ಹಾದು ಹೋಗಲಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬAಧಿಸಿದAತೆ ಬಿ. ನಾಗೇಂದ್ರ ರವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಹೋರಾಟ ನಡೆಸಿದ್ದ ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಘೋಷಣೆ ಮಾಡಿತ್ತು. ಪಾದಯಾತ್ರೆ ಆರಂಭಕ್ಕೂ ಮುನ್ನವೇ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಬಿಜೆಪಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಪಾದಯಾತ್ರೆ ನಡೆಸುವುದಾಗಿ ಹೇಳಿ, ಇಂದಿನಿAದ ಪಾದಯಾತ್ರೆಯನ್ನು ಆರಂಭಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಈ 10 ದಿನಗಳ ಪಾದಯಾತ್ರೆ ಸಾಗಲಿದೆ.
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕರುಗಳಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರುಗಳಾದ ಶ್ರೀರಾಮುಲು, ಜನಾರ್ದನ ರೆಡ್ಡಿ, ಸಿ.ಟಿ. ರವಿ, ರಾಜುಗೌಡ, ಶಿವನಗೌಡ ನಾಯಕ್, ಸಂಸದರಾದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ, ಶಾಸಕರುಗಳಾದ ಮಾನಪ್ಪ ವಜ್ಜಲ್, ಬಸವರಾಜ್ ಮತ್ತಿಮೋಡ, ಬೈರತಿ ಬಸವರಾಜು, ಎನ್. ರವಿಕುಮಾರ್ ಸೇರಿದಂತೆ ಬಿಜೆಪಿಯ ಎಲ್ಲಾ ಶಾಸಕರು, ಸಂಸದರು, ಪ್ರಮುಖ ಮುಖಂಡರುಗಳು, ಮಾಜಿ ಶಾಸಕರುಗಳು ಈ ಪಾದಯಾತ್ರೆ ಉದ್ಘಾಟನಾ ಸಮಾವೇಶದಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧದ ಹೋರಾಟಕ್ಕೆ ಸಾಥ್ ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ 10 ದಿನದ ಪಾದಯಾತ್ರೆಯಲ್ಲಿ ಪಕ್ಷದ ಎಲ್ಲಾ ನಾಯಕರು ಪಾಲ್ಗೊಳ್ಳುತ್ತಾರೆ. ಇದೊಂದು ಐತಿಹಾಸಿಕ ಪಾದಯಾತ್ರೆ ಎಂದು ಅವರು ಹೇಳಿದರು.
ಪಾದಯಾತ್ರೆಯಲ್ಲಿ ಎಷ್ಟು ಜನ ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ. ನಮ್ಮ ಹೋರಾಟ ಎಷ್ಟು ನಡೆಯುತ್ತದೆ ಎಂಬುದು ಮುಖ್ಯ. ನಮ್ಮ ಹೋರಾಟಕ್ಕೆ ಹೆದರಿ ಈಗಾಗಲೇ ಒಬ್ಬ ಭ್ರಷ್ಟ ಸಚಿವ ರಾಜೀನಾಮೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷದ ಹೊಸ ಯುಗ ಇಂದಿನಿAದ ಆರಂಭವಾಗಲಿದೆ ಎಂದು ಅವರು ಹೇಳಿದರು.

ಭ್ರಷ್ಟಾಚಾರ ಬಯಲು ಮಾಡುವ ಉದ್ದೇಶ : ಬಿವೈವಿ

ಲಿಂಗಸುಗೂರು ಕ್ಷೇತ್ರದ ಗುರಗುಂಟಾದಲ್ಲಿ ಅಮರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ರಾಜ್ಯದ ಭ್ರಷ್ಟ, ಜನವಿರೋಧಿ, ದಲಿತ ವಿರೋಧಿ, ಅಭಿವೃದ್ಧಿ ವಿರೋಧಿ, ಕಾಂಗ್ರೆಸ್ ಸರ್ಕಾರದ ಬಿಜೆಪಿಯ ಹೋರಾಟ ನಿರಂತರವಾಗಿ ನಡೆಯಲಿದೆ. ಮಂಗಳವಾರದಿ0ದ ಆರಂಭವಾಗಿರುವ ಪಾದಯಾತ್ರೆ ಈ ತಿಂಗಳ 10ಕ್ಕೆ ಮುಗಿಯಬಹುದು. ಆದರೆ ಸರ್ಕಾರದ ವಿರುದ್ಧ ಹೋರಾಟ ನಿರಂತರವಾಗಿರಲಿದೆ. ಈ ಸರ್ಕಾರವನ್ನು ಬುಡಸಮೇತ ಕಿತ್ತೆಸೆಯುವವರೆಗೂ ನಮ್ಮ ಹೋರಾಟ ಇರಲಿದೆ. ಮುಂದೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಬಯಲು ಮಾಡುತ್ತೇವೆ ಎಂದು ಅವರು ಹೇಳಿದರು.

Recent Articles

spot_img

Related Stories

Share via
Copy link