ಒಳಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಆತಂಕ ಬೇಡ : ಸಚಿವ

ಹಾವೇರಿ: ಒಳಮೀಸಲಾತಿ ಬಗ್ಗೆ ಅಲೆಮಾರಿಗಳು ಆತಂಕಪಡುವ ಅಗತ್ಯತೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹಾವೇರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಶೇ. ೪.೫ ಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಮೀಸಲಾತಿ ಇದೆ ಎಂದು ತಿಳಿಸಿದರು.

ಶೇ.೪.೫ ರಲ್ಲಿ ಪ್ರತಿಶತ ೨೦ ರಷ್ಟು ಮೀಸಲಾತಿ ಅಲೆಮಾರಿಗಳಿಗೆ ಮೀಸಲಿಡಲಾಗಿದೆ. ಜನಗಣತಿ ಇನ್ನೂ ಮುಕ್ತಾಯವಾಗಿಲ್ಲ. ಕೇಂದ್ರದ ಜನಗಣತಿ ಆರಂಭವಾಗಿದೆ. ರಾಜ್ಯ ಸರ್ಕಾರ ಜಾತಿಜನಗಣತಿ ಇನ್ನೂ ಮುಗಿದಿಲ್ಲ. ರಾಜ್ಯದಲ್ಲಿನ ಜಾತಿಗಣತಿ ಪೂರ್ಣಪ್ರಮಾಣದಲ್ಲಿ ಮಾಡಲಾಗಿಲ್ಲ. ಇದಕ್ಕೆ ಸಮಯ ಬೇಕಾಗಬಹುದು ಎಂದರು.

ಬಿಜೆಪಿ ಸರ್ಕಾರವಿದ್ದಾಗ ಐದು ಜಾತಿಗಳಿಗೆ ಮಾತ್ರ ಮೀಸಲಾತಿ ನೀಡಿದ್ದರು. ನೀವು ೬೩ ಜಾತಿಗಳಿಗೆ ಮೀಸಲಾತಿ ನೀಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನೀವು ಹೇಳುವುದು ನೋಡಿದರೇ ಅದಕ್ಕೆ ಒಂದು ಸಮಿತಿ ರಚಿಸಬೇಕಾಗುತ್ತದೆಯೋ ಏನು ಎಂದು ಹಾಸ್ಯಚಟಾಕಿ ಹಾರಿಸಿದರು. ನಮಗೆ ಈ ಕುರಿತಂತೆ ಗೊಂದಲವಿದೆ, ಅದನ್ನು ಸರಿಯಾಗಿ ನೋಡುತ್ತೇವೆ ಎಂದು ಹೇಳಿದರು.

ಮೇ ೪ರ ನಂತರ ರಾಜ್ಯ ರಾಜಕಾರಣ ಬದಲಾವಣೆ ಕುರಿತಂತೆ ಮಾತನಾಡಿದ ಅವರು, ಈ ಕುರಿತಂತೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ. ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಬೇರೆಯವರು ಹೇಳಿದ್ದಾರೆ ಎಂದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಾಜುಗೌಡ ಮಾತನಾಡಿ, ಒಳಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ದಲಿತರಿಗೆ ಅನ್ಯಾಯ ಮಾಡುತ್ತಿದೆ. ಕಾಂಗ್ರೆಸನವರು ಅಹಿಂದ ಸರ್ಕಾರ ಅಂತಾರೆ. ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ವೋಟ್ ಬ್ಯಾಂಕ್ ಹೆಸರಲ್ಲಿ ದಲಿತರಿಗೆ ಮೋಸ ಮಾಡುತ್ತಾರೆ ಎಂದು ಆರೋಪಿಸಿದರು.

 

Recent Articles

spot_img

Related Stories

Share via
Copy link