ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್

ಬೆಂಗಳೂರು: ಮೇ.1 ರಾಜ್ಯದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕೆ.ಇ.ಆರ್.ಸಿ ವಿದ್ಯುತ್ ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಇಂದಿನಿಂದಲೇ ಗೃಹಬಳಕೆ ವಿದ್ಯುತ್ ದರದಲ್ಲಿ ಏರಿಕೆ ಜಾರಿಯಾಗಿದ್ದು, ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದೆ. ಮೇ ತಿಂಗಳ ಬಿಲ್‌ನಿಂದ ಈ ಹೊಸ ದರ ಅನ್ವಯವಾಗಲಿದೆ. ಎಸ್ಕಾಂಗಳು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಗಣಿಸಿದ ಕೆಇಆರ್ಸಿ, ಈ ದರ ಏರಿಕೆಗೆ ಮಂಜೂರು ನೀಡಿದೆ.

2024-25ನೇ ಆರ್ಥಿಕ ವರ್ಷದಲ್ಲಿ ವಿದ್ಯುತ್ ಮಾರಾಟದಿಂದ 34,084 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿತ್ತು. ಆದರೆ, ಕೇವಲ 32,019 ಕೋಟಿ ರೂಪಾಯಿ ಆದಾಯ ಮಾತ್ರ ಬಂದಿದ್ದು, ಸುಮಾರು 2,068 ಕೋಟಿ ರೂಪಾಯಿ ಕೊರತೆ ಉಂಟಾಗಿದೆ.

ಈ ಕೊರತೆಯನ್ನು ಪೂರೈಸಲು ಗ್ರಾಹಕರಿಂದಲೇ ಸಂಗ್ರಹಿಸುವAತೆ ಕೆಇಆರ್ಸಿ ಆದೇಶಿಸಿದೆ. ಅದರ ಭಾಗವಾಗಿ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದೆ.

ದರ ಏರಿಕೆಯಿಂದ ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ಮತ್ತಷ್ಟು ಭಾರವಾಗಲಿದೆ.

Recent Articles

spot_img

Related Stories

Share via
Copy link