ಬೆಂಗಳೂರು ನಾಗರಿಕರಿಗೆ ಡಿಕೆಶಿ ಬಂಪರ್ ಕೊಡುಗೆ

 

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾದ ‘ಭೂ ಗ್ಯಾರಂಟಿ’ ಮೂಲಕ ಬೆಂಗಳೂರು ನಾಗರಿಕರಿಗೆ ‘ಇ’ ಖಾತಾ ವಿತರಣೆ, ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿ ಶೇ.5 ರಿಂದ ಶೇ.15 ಕ್ಕೆ ಹೆಚ್ಚಳ, 100 ದಿನದಲ್ಲಿ ‘ಎ’ ಯಿಂದ ‘ಬಿ’ ಖಾತಾ ಶುಲ್ಕ ಪಾವತಿಸಿದರೆ ಶೇ. 60 ರಷ್ಟು ರಿಯಾಯಿತಿ, ಶಿವರಾಂ ಕಾರಂತ ಬಡಾವಣೆಯ ಭೂ ಮಾಲೀಕರಿಗೆ 18 ಸಾವಿರ ನಿವೇಶನ ಹಂಚಿಕೆ, ಗ್ರೀನ್ ಬೆಂಗಳೂರು ಕಾರ್ಯಕ್ರಮ, ಬಿಡಿಎ ಮನೆಗಳ ಮಾರಾಟ ಸೇರಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ನಾಗರಿಕರಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಬಂಪರ್ ಕೊಡುಗೆಯಾಗಿ ಘೋಷಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಬೆಂಗಳೂರು ಅನೇಕ ನಾಗರಿಕಸ್ನೇಹಿ ಘೋಷಣೆಗಳನ್ನು ಮಾಡಿದರು.

ಬೆಂಗಳೂರು ಅಭಿವೃದ್ದಿಗೆ ಸುಮಾರು 150 ಯೋಜನೆಗಳಿದ್ದು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಈ ಬಗ್ಗೆ ಪ್ರತ್ಯೇಕ ಮಾಹಿತಿ ನೀಡಲಾಗುವುದು. ಮೊದಲಿಗೆ ‘ನನ್ನ ಖಾತೆ, ನನ್ನ ಹಕ್ಕು’ ಅಭಿಯಾನ ಮೂರು ತಿಂಗಳ ಕಾಲ ಶನಿವಾರ ನಡೆಯಲಿದೆ. ?ಪ್ರತಿ ಶನಿವಾರ ಬೆಂಗಳೂರಿನ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ತಲಾ 10 ರಂತೆ 50 ಸ್ಥಳಗಳಲ್ಲಿ ಈ ಅಭಿಯಾನ (ಇ-ಖಾತಾ ಸಿಟಿಜನ್ ಓಪನ್ ಹೌಸ್) ಕಾರ್ಯಕ್ರಮ ನಡೆಯಲಿದೆ. ಮೇ 16 ರಿಂದ ಇದಕ್ಕೆ ಚಾಲನೆ ನೀಡಲಾಗುವುದು. ಬೆಳಿಗ್ಗೆ 10 ಕ್ಕೆ ಪ್ರಾರಂಭವಾಗಿ ಸಂಜೆವರೆಗೆ ನಡೆಯುವ ಈ ಅಭಿಯಾನದ ಸ್ಥಳಗಳನ್ನು ಮುಂಚಿತವಾಗಿ ತಿಳಿಸಲಾಗುವುದು? ಎಂದರು.

100 ದಿನಗಳಲ್ಲಿ ಶುಲ್ಕ ಪಾವತಿ ಮಾಡಿದರೆ ಶೇ.60 ರಷ್ಟು ರಿಯಾಯಿತಿ : ‘ಬಿ’ ಖಾತೆಯಿಂದ ‘ಎ’ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದವರು ದಾಖಲೆಗಳನ್ನು ಸರಿಯಾಗಿ ನೀಡಿದ್ದರೆ ಈಗ ಗೈಡೆನ್ಸ್ ವ್ಯಾಲ್ಯೂನ ಶೇ. 5 ರಷ್ಟನ್ನು ಕಟ್ಟಬೇಕಿದೆ. ಆದರೆ 100 ದಿನಗಳ ಒಳಗಾಗಿ ಶುಲ್ಕ ಪಾವತಿಸಿದರೆ ಶೇ. 2 ರಷ್ಟು ಕಟ್ಟಿದರೆ ಸಾಕು. ಅಂದರೆ ಶೇ.60 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಅಂದರೆ 1 ಕೋಟಿ ಆಸ್ತಿಯ ಬೆಲೆ ಇದ್ದರೆ 5 ಲಕ್ಷ ಶುಲ್ಕ ಪಾವತಿ ಮಾಡಬೇಕಿತ್ತು. ಈಗ 2 ಲಕ್ಷ ಕಟ್ಟಿದರೆ ಸಾಕು. ಇದರಿಂದ 7 ಲಕ್ಷ ಆಸ್ತಿ ಮಾಲೀಕರಿಗೆ ಉಪಯೋಗವಾಗಲಿದೆ ಎಂದರು.

100 ದಿನಗಳಲ್ಲಿ ಇದರ ಉಪಯೋಗ ಪಡೆಯಲಿಲ್ಲ ಎಂದರೆ ನಂತರ ಶೇ.5 ರಷ್ಟೇ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಪ್ರತಿಯೊಂದು ಆಸ್ತಿ ದಾಖಲೆಗಳಲ್ಲಿ ಜಿಪಿಎಸ್, ಮಾಲೀಕರ ಫೋಟೋ ಇರುತ್ತದೆ. ಒಂದೇ ಒಂದು ರೂಪಾಯಿ ಲಂಚ ಇಲ್ಲದಂತೆ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯವರು, ಅಧಿಕಾರಿಗಳು ಇದರ ಜವಾಬ್ದಾರಿ ಹೊತ್ತಿರುತ್ತಾರೆ. ಜೊತೆಗೆ ಆನ್ ಲೈನ್ ಅಲ್ಲೂ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದರು.

ಈ ಯೋಜನೆ ಬಗ್ಗೆ ಪ್ರತಿ ಮನೆಗೂ ಮಾಹಿತಿ ತಲುಪಿಸಲಾಗುವುದು. ವಾಟ್ಸಪ್ ಸೇರಿದಂತೆ ಇತರೇ ಮಾಧ್ಯಮಗಳ ಮೂಲಕ ಮಾಹಿತಿ ರವಾನಿಸಲಾಗುವುದು. ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಮಾಹಿತಿ ನೀಡಲಾಗುವುದು. ದಾಖಲೆಗಳು ಕನ್ನಡದಲ್ಲಿ ಇರುತ್ತವೆ ಎಂದರು.

ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿ ಶೇ.5 ರಿಂದ ಶೇ.15 ಕ್ಕೆ ಹೆಚ್ಚಳ : ಕಟ್ಟಡದ ಉಲ್ಲಂಘನೆ ವಿನಾಯಿತಿ ಮಿತಿಯನ್ನು (ಎತ್ತರ, ಎಫ್ ಎಆರ್, ಸೆಟ್ ಬ್ಯಾಕ್) ಶೇ.5 ರ ಬದಲಾಗಿ ಶೇ.15 ಕ್ಕೆ ಹೆಚ್ಚಿಸಲಾಗಿದೆ. ಶೇ.15 ರಷ್ಟು ಪ್ರಮಾಣದ ಉಲ್ಲಂಘನೆಗಳಿಗೆ ದಂಡ ಪಾವತಿಸಿಕೊಂಡು ಸ್ವಾಧೀನಾನುಭವ ಪ್ರಮಾಣ ಪತ್ರ ನೀಡಲು ಒಪ್ಪಿಗೆ ನೀಡಲಾಗಿದೆ. ಸುಪ್ರೀಂ ಕೋರ್ಟ್ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯದ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರು ಸರಬರಾಜು ಸೌಕರ್ಯ ಒದಗಿಸಬಾರದೆಂದು ಆದೇಶಿಸಿದೆ. ಈ ಸಮಸ್ಯೆ ನಿವಾರಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ಮಾಡಲಾಗುತ್ತಿದೆ? ಎಂದು ಹೇಳಿದರು.

ನಾವು ಅಕ್ರಮ ಅಕ್ರಮ ಮಾಡುತ್ತಿಲ್ಲ. ನಗರದಲ್ಲಿ ಭೂಮಿಯ ತೀವ್ರ ಬೇಡಿಕೆಯಿಂದ ಹಾಗೂ ದಿನೇ ದಿನೇ ಬೆಳವಣಿಗೆಗಳ ಒತ್ತಡದಿಂದ ನಿವೇಶನ/ ಸ್ವತ್ತಿನ ಮಾಲೀಕರು ನಿಯಮಾನುಸಾರ ಸೆಟ್ ಬ್ಯಾಕ್ ಬಿಡದೆ ನಕ್ಷೆ ಉಲ್ಲಂಘನೆ ಮಾಡಿ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ. 20/30, 30/40, 40/60 ಅಳತೆಯ ನಿವೇಶನಗಳಿಗೆ ಗರಿಷ್ಟ ಶೇ. 50 ರಷ್ಟು ಸೆಟ್ ಬ್ಯಾಕ್ ರಿಯಾಯಿತಿ ನೀಡಲು ಕಾಯ್ದೆಯಲ್ಲಿ ಅವಕಾಶವಿದೆ. ನಾವೀಗ ಶೇ. 15 ರಷ್ಟು ವಿನಾಯಿತಿ ನೀಡಿದ್ದೇವೆ ಎಂದರು.

2020 ರಲ್ಲಿ ಬಿಜೆಪಿ ಸರ್ಕಾರ ’38 ಡಿ’ ಎನ್ನುವ ಕಾನೂನು ಜಾರಿಗೆ ತಂದಿತ್ತು. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಬಿಡಿಎ ಲೇಔಟ್ ಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಇದರಲ್ಲಿ 570 ಜನ ಮಾತ್ರ ಅರ್ಜಿ ಸಲ್ಲಿಸಿದ್ದರು. 200 ರಿಂದ 600 ಅಡಿವರೆಗೆ ಶೇ.10 ರಷ್ಟು, 600 ರಿಂದ 900 ಅಡಿವರೆಗೆ ಶೇ.25 ರಷ್ಟು, 1200 ರಿಂದ 2400 ವರೆಗೆ ಶೇ.40 ರಷ್ಟು, 2400 ರಿಂದ 4000 ವರೆಗೂ ಶೇ.50 ರಷ್ಟು ಗೈಡೆನ್ಸ್ ವ್ಯಾಲ್ಯೂ ಮೇಲೆ ಶುಲ್ಕ ಕಟ್ಟಲು ಕಾನೂನಿನಲ್ಲಿ ಅವಕಾಶ ಮಾಡಿದ್ದರು. ಆಗ 6 ತಿಂಗಳ ಕಾಲ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಯಾರೂ ಕೂಡ ಶುಲ್ಕ ಕಟ್ಟಲು ಮುಂದೆ ಬರಲಿಲ್ಲ. ಶುಲ್ಕ ಹೆಚ್ಚಾಯಿತು ಎಂದು ಯೋಜನೆ ಪ್ರಯೋಜನ ಪಡೆಯಲಿಲ್ಲ. ಈಗಲೂ ಈ ದಾಖಲೆಗಳು ಬರೀ ಸರ್ಕಾರಿ ದಾಖಲೆಗಳಾಗಿ ಉಳಿದುಕೊಂಡಿವೆ” ಎಂದರು.

ಈಗ ಅರ್ಜಿ ಹಾಕಲು ಜೂನ್ 15 ರಿಂದ ಒಟ್ಟು ಮೂರು ತಿಂಗಳ ಕಾಲ ಅವಕಾಶ ಕಲ್ಪಿಸಿಕೊಡಲಾಗುವುದು. ಓಟಿಎಸ್ ಜಾರಿ ಮಾಡಲಾಗುವುದು. ಮೊದಲ 100 ದಿನ ಅರ್ಜಿ ಸಲ್ಲಿಸಲು, 100 ದಿನ ಅರ್ಜಿ ಪರಿಶೀಲನೆಗೆ, ನಂತರ ಪಾವತಿಗೆ ಅವಕಾಶ ನೀಡಲಾಗವುದು. 1 ವರ್ಷ ಕಾಲಮಿತಿಯೊಳಗೆ ಅಂದರೆ 2027 ರ ಜೂನ್ ಗೆ ಈ ಯೋಜನೆ ಮುಕ್ತಾಯಗೊಳಿಸಲಾಗವುದು? ಎಂದರು.

ಮೂರು ತಿಂಗಳ ಒಳಗೆ ಅರ್ಜಿ ಸಲ್ಲಿಸಿದವರು ಶೇ 10 ರ ಬದಲು ಶೇ. 5 ರಷ್ಟು ಮಾತ್ರ ಪಾವತಿ ಮಾಡಬಹುದು. ಅವರಿಗೆ ಶೇ.50 ರಷ್ಟು ರಿಯಾಯಿತಿ ದೊರೆಯಲಿದೆ. ಕಾನೂನಿನ ಚೌಕಟ್ಟಿನಲ್ಲಿಯೇ ರಿಯಾಯಿತಿ ನೀಡಲಾಗಿದೆ. ಗೈಡೆನ್ಸ್ ವ್ಯಾಲ್ಯೂ ಪೈಕಿ ಶೇ. 25 ಇರುವ ಕಡೆ ಶೇ 12.5, ಶೇ.40 ಇರುವ ಕಡೆ ಶೇ.20 ರಷ್ಟು, ಶೇ.50 ಇರುವ ಕಡೆ ಶೇ.25 ರಷ್ಟು ರಿಯಾಯಿತಿ ನೀಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಯವರು ಸೇರಿದಂತೆ ಸಚಿವರ ಬಳಿಯೂ ಚರ್ಚೆ ನಡೆಸಲಾಗಿದೆ ಎಂದರು.

ಈ ಯೋಜನೆಯ ಸೌಲಭ್ಯ ಬಳಸಿಕೊಳ್ಳದೇ ಇದ್ದರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಈಗಾಗಲೇ ಬಿಡಿಎ 2 ಸಾವಿರ ಕೋಟಿ ಮೌಲ್ಯದ ಆಸ್ತಿಗಳನ್ನು ವಶಕ್ಕೆ ಪಡೆದಿದೆ ಎಂದರು.

15 ಲಕ್ಷ ಸಸಿಗಳನ್ನು ನೆಡುವ ಗ್ರೀನ್ ಬೆಂಗಳೂರು ಕಾರ್ಯಕ್ರಮ
?ಬಿಡಿಎಗೆ 50 ವರ್ಷ ತುಂಬಿದೆ. ಇದರ ನೆನಪಿಗೆ ಕೆಂಪೇಗೌಡ ಜಯಂತಿಯAದು ?ಗ್ರೀನ್ ಬೆಂಗಳೂರು? ಕಾರ್ಯಕ್ರಮ ನಡೆಸಲಾಗುವುದು. ಸಂಘ ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸೇರಿದಂತೆ ಎಲ್ಲರೂ ಸೇರಿ ಒಂದೇ ದಿನದಂದು 15 ಲಕ್ಷ ಸಸಿಗಳನ್ನು ನೆಡಲಾಗುವುದು. ಜೂನ್ 27 ಈ ಕಾರ್ಯಕ್ರಮ ನಡೆಸಲಾಗುವುದು ಎಂದರು.

?ಬಿಜಿನೆಸ್ ಕಾರಿಡಾರ್ ನ ಮೊದಲನೇ ಹಂತಕ್ಕೆ ಶೇ.80 ರಷ್ಟು ಜನ ಒಪ್ಪಿಗೆ ನೀಡಿದ್ದಾರೆ. ಎರಡನೇ ಹಂತಕ್ಕೆ ನೋಟಿಫಿಕೇಷನ್ ನೀಡಲಾಗಿದೆ. ರೈತರೂ ಸಹ ಮುಂದಕ್ಕೆ ಬರುತ್ತಿದ್ದಾರೆ. ನಾವು ಕೊಟ್ಟಿರುವ ಪರಿಹಾರವನ್ನು ದೇಶದಲ್ಲಿ ಬೇರೆ ಯಾರೂ ಕೊಟ್ಟಿಲ್ಲ. ಹೊಸೂರು ರಸ್ತೆಯಿಂದ ಮೈಸೂರು ರಸ್ತೆಯವರೆಗೂ 33 ಕಿ.ಮೀ ಬೆಂಗಳೂರು ಬಿಜಿನೆಸ್ ಕಾರಿಡಾರ್ ಅನ್ನು ಬೆಂಗಳೂರು ದಕ್ಷಿಣದಲ್ಲಿ ನಿರ್ಮಾಣ ಮಾಡಲಾಗುವುದು. ದುಪ್ಪಟ್ಟು ಪರಿಹಾರ ನೀಡಲು ಅವಕಾಶ ಇಲ್ಲದಿದ್ದರೂ ನಾನು ಸಚಿವ ಸಂಪುಟ ಸಭೆ ಮುಂದಿಟ್ಟು, ದುಪ್ಪಟ್ಟು ಬೆಲೆ ನೀಡುತ್ತಿದ್ದೇವೆ. ಟಿಡಿಆರ್, ರಸ್ತೆ ಪಕ್ಕದಲ್ಲೇ 35% ವಾಣಿಜ್ಯ ಭೂಮಿ, ಎಫ್ ಎಆರ್, ವಸತಿ ಪ್ರದೇಶದಲ್ಲಿ 40% ಭೂಮಿ ಸೇರಿದಂತೆ ಅನೇಕ ಅವಕಾಶ ನೀಡುತ್ತಿದ್ದೇವೆ. ಅವರಿಗೆ ವಾಣಿಜ್ಯ ಜಮೀನು ನೀಡುತ್ತಿರುವುದರಿಂದ ಅವರಿಗೆ ಎಷ್ಟು ನೆರವಾಗಲಿದೆ ಎಂದರೆ ಹೇಳಲು ಸಾಧ್ಯವಿಲ್ಲ. ಈ ರೀತಿ ಪರಿಹಾರವನ್ನು ಇಡೀ ದೇಶದಲ್ಲಿ ಎಲ್ಲೂ ನೀಡಿಲ್ಲ. ಮುಂಬೈನಲ್ಲಿ ಜಮೀನು ಸ್ವಾಧೀನಕ್ಕೆ ಕೇವಲ 12.5% ಮಾತ್ರ ನೀಡಿದ್ದಾರೆ. ಇಲ್ಲಿ ಶಾಸಕರ, ಮಂತ್ರಿಗಳ ಆಸ್ತಿಗಳಿದ್ದವು ಅವರು ಸಹ ಮುಂದೆ ಬಂದಿದ್ದಾರೆ. ಅವರು ಸಹ ಒಳ್ಳೆಯ ಯೋಜನೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ ನಾವು ಇದನ್ನು ಡಿನೋಟಿಫೈ ಮಾಡಲು ಸಾಧ್ಯವಿಲ್ಲ? ಎಂದರು.

1.44 ಕೋಟಿಗೆ ಬಿಡಿಎ ಮನೆ: ವೈಟ್ ಫೀಲ್ಡ್ ನಲ್ಲಿ 1,900 ಮನೆಗಳನ್ನು ಕಟ್ಟಲಾಗಿದೆ. 1 ಬಿಎಚ್ ಕೆ ಮನೆ 760 ಚದರ ಅಡಿಯಿದೆ. ಇದನ್ನು 6,686 ರೂಪಾಯಿಗೆ ನೀಡಲಾಗುತ್ತಿದೆ. ಇದಕ್ಕೆ ಮೇ 15 ನೇ ತಾರೀಕಿನಿಂದ ಅರ್ಜಿ ಕರೆಯಲಾಗುತ್ತಿದೆ. 1,733 ಚದರ ಅಡಿಯ 3 ಬಿಎಚ್ ಕೆ ಮನೆಗಳಿಗೆ 8,309 ರಂತೆ 1.44ಕೋಟಿ ರೂಪಾಯಿಗೆ ನೀಡಲಾಗುತ್ತಿದೆ ಎಂದರು.

?ಚೆನ್ನೆöÊ, ಹೈದರಾಬಾದ್, ದೆಹಲಿ, ಮುಂಬೈ ಎಲ್ಲಾ ಕಡೆಯೂ ಸಂಚಾರ ದಟ್ಟಣೆ ಇದ್ದೇ ಇದೆ. ಹೆಬ್ಬಾಳದ ಬಳಿ ಸ್ವಲ್ಪ ಒತ್ತಡವನ್ನು ಕಡಿಮೆ ಮಾಡಿದ್ದೇವೆ. ಇನ್ನೂ ಸರಳ ಮಾಡಬೇಕು ಎಂದು ಮುಂದುವರೆದಿದ್ದೇವೆ. ಈಗ ಕಡಿಮೆ ಅಂತರದ ಸುರಂಗ ರಸ್ತೆಯನ್ನು ಮಾಡುತ್ತಿದ್ದೇವೆ. ಹೆಬ್ಬಾಳ ಜಂಕ್ಷನ್ ಬಳಿಯಿಂದ ಕೃಷಿ ವಿವಿ ಬಳಿ ಹಾದು ಹೋಗಲಿದೆ. ಇಲ್ಲಿ ಮೂರು ಲೈನ್ ಗಳ ಕಟ್ ಅಂಡ್ ಕರ್ವ್ ಟನಲ್ ಬರಲಿದೆ. ಒಟ್ಟು ಈ ಸುರಂಗ ಮಾರ್ಗ ಆರು ಪಥಗಳನ್ನು ಹೊಂದಿರುತ್ತದೆ. ಇದು 2.2 ಕಿಮೀ ಉದ್ದ ಇರಲಿದೆ. ಈ ಯೋಜನೆಯನ್ನು ಋತ್ವಿಕ್ ಟನಲ್ ಗೆ ನೀಡಿದ್ದು 18 ತಿಂಗಳಲ್ಲಿ ಇದನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ. ಮೇಕ್ರಿ ವೃತ್ತದ ಬಳಿ 1.7 ಕಿಮೀ ಉದ್ದದ 4 ಪಥ ಹೊಂದಿರುವ ಎಲಿವೇಟೆಡ್ ಕಾಡಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ತಿಂಗಳ ಕೊನೆಗೆ ಈ ಎರಡು ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಲಾಗುವುದು? ಎಂದರು.

?ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 631 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 10.77 ಕಿಮೀ ಉದ್ದದ ರಸ್ತೆಯನ್ನು ಮುಂದಿನ 15 ದಿನಗಳಲ್ಲಿ ಲೋಕಾರ್ಪಣೆಗೊಳಿಸಲಾಗುವುದು. ಈ ರಸ್ತೆ ನೋಡಿದರೆ ಎಲ್ಲರಿಗೂ ಆಶ್ಚರ್ಯವಾಗುತ್ತದೆ? ಎಂದರು.

ಎಷ್ಟು ಆದಾಯ ಬರಲಿದೆ ಎಂದು ಕೇಳಿದಾಗ, ?ನಮ್ಮ ನಿರೀಕ್ಷೆ ಗಗನಕ್ಕಿದೆ. ಈಗಾಗಲೇ 7 ಸಾವಿರ ಜನ ಶೇ.5 ರಷ್ಟು ಹಣ ಕಟ್ಟಿದ್ದಾರೆ. ಇದಕ್ಕೆ ಏನು ಪರಿಹಾರ ಹುಡಕಬೇಕು ಎಂದು ಚಿಂತಿಸಲಾಗುವುದು. ಜನಸಾಮಾನ್ಯರಿಗೆ ಉಪಯೋಗವಾಗಲಿ ಎಂದು ಈ ಯೋಜನೆ ತರಲಾಗಿದೆ? ಎಂದರು.

ಬಿಡಿಎ ಸಂಸ್ಥೆ ಅವ್ಯವಸ್ಥೆಯಿಂದ ಕೂಡಿದೆ ಎಂದು ಹೇಳಿದಾಗ, ಅದನ್ನು ನಾವು ಸರಿ ಮಾಡುತ್ತಿದ್ದೇವೆ ಎಂದರು.

ಖಾತೆಯನ್ನು ವಿಪಕ್ಷಗಳು ಅಧಿಕಾರಕ್ಕೆ ಬಂದರೆ ಉಚಿತವಾಗಿ ಮಾಡಿಕೊಡುತ್ತೇವೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, ?ಯಾರೂ ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಬರಲೂ ಇಲ್ಲ, ಬರುವುದೂ ಇಲ್ಲ? ಎಂದರು.

ಸರ್ಕಾರಕ್ಕೆ ಜಿಬಿಎ ಚುನಾವಣೆ ಮಾಡುವ ಮನಸ್ಸಿಲ್ಲ ಎನ್ನುವ ಟೀಕೆ ಬಗ್ಗೆ ಕೇಳಿದಾಗ, ?ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ? ಎಂದರು.

ಕಸದ ಟೆಂಡರ್ ನಲ್ಲಿ ಭ್ರಷ್ಟಾಚಾರವಾಗಿದೆ ಎನ್ನುವ ಬಗ್ಗೆ ಕೇಳಿದಾಗ, ?ಇದು ದೊಡ್ಡ ಮಾಫಿಯಾವಿದೆ. ವಿಪಕ್ಷಗಳನ್ನು ಇವರುಗಳು ಉಪಯೋಗಿಸಿಕೊಳ್ಳುತ್ತಿದ್ದಾರೆ. 15-20 ವರ್ಷಗಳಿಂದ ಟೆಂಡರ್ ಮಾಡಲು ಬಿಟ್ಟಿಲ್ಲ. ಇದಕ್ಕೆಲ್ಲಾ ಅವಕಾಶ ನೀಡುವುದಿಲ್ಲ. ನಾವು ಕಾನೂನು ಪ್ರಕಾರ ನಡೆಯುತ್ತೇವೆ. ಅಧಿಕಾರಿಗಳು, ನನ್ನ ಮೇಲೆ ಎಲ್ಲರ ಮೇಲೂ ಆರೋಪ ಮಾಡುತ್ತಾರೆ. ಮಾಫಿಯಾಗಳು ತಿಂದು ರೂಡಿ ಮಾಡಿಕೊಂಡಿವೆ? ಎಂದರು.

 

ಭೂ ಗ್ಯಾರಂಟಿ; ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತ ಡಿಜಿಟಲ್ ಆಸ್ತಿ ಹಕ್ಕು

ನಾವು ಜಾರಿಗೆ ತಂದಿರುವ ‘ಇ’ ಖಾತಾ ಆಂದೋಲನ ಭಾರತದ ಅತಿದೊಡ್ಡ ಸಮಗ್ರ ಡಿಜಿಟಲ್ ನಗರ ಆಸ್ತಿ ದಾಖಲೆ ವ್ಯವಸ್ಥೆಯಾಗಿದ್ದು , 23 ಲಕ್ಷಕ್ಕೂ ಅಧಿಕ ಆಸ್ತಿ ದಾಖಲೆಗಳನ್ನು ಆನ್ಲೆöÊನ್ ಮೂಲಕ ನೇರವಾಗಿ ನಾಗರಿಕರ ಕೈಗೆ ತಲುಪಿಸಿದೆ. ಹಳೆಯ, ಅಸ್ಪಷ್ಟ ಹಾಗೂ ಕೈಪಿಡಿ ವ್ಯವಸ್ಥೆಯನ್ನು hಣಣಠಿs://ಃBಒPeಂಚಿsಣhi.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಪಡೆದುಕೊಳ್ಳಬಹುದು. ನಗರದಲ್ಲಿ ದಾಖಲೆಗಳು ಸರಿ ಇರುವ ಸುಮಾರು 16 ಲಕ್ಷ ‘ಎ’ ಖಾತೆಗಳಿವೆ. 7 ಲಕ್ಷ ‘ಬಿ’ ಖಾತೆಗಳಿವೆ. ಭೂ ಗ್ಯಾರಂಟಿ ಮೂಲಕ ಬೆಂಗಳೂರಿನ ಪ್ರತಿಯೊಬ್ಬ ನೈಜ ಆಸ್ತಿ ಮಾಲೀಕರಿಗೂ ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಎಲ್ಲೆಡೆಯೂ ಲಭ್ಯವಾಗುವ ಡಿಜಿಟಲ್ ಆಸ್ತಿ ದಾಖಲೆಗಳನ್ನು ಒದಗಿಸಲಾಗುವುದು. ಇದನ್ನು ಪಾರದರ್ಶಕ, ಸುರಕ್ಷಿತ ಹಾಗೂ ನಾಗರಿಕ ಕೇಂದ್ರಿತ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸಲಾಗಿದೆ ಎಂದರು.

 

Recent Articles

spot_img

Related Stories

Share via
Copy link