
ಕೊಪ್ಪಳ: ಹಿಂಬದಿಯಿ0ದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರಾ÷್ಯಕ್ಟರ್ವೊಂದು ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ 6 ಜನರು ಸಾವನ್ನಪ್ಪಿ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಗಡಿಯಲ್ಲಿನ ತುಂಗಭದ್ರಾ ಜಲಾಶಯದ ಸಮೀಪ ರಾಷ್ಟಿçÃಯ ಹೆದ್ದಾರಿ 50ರಲ್ಲಿ ಶುಕ್ರವಾರ ಸಂಭವಿಸಿದೆ.
ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಕೆಂಚಪ್ಪ (35), ಮಹಾಂತೇಶ್ (18) ಭರತ್ (01), ಸವಿತಾ (12) ಮಾರೇಶ್ ಹಾಗೂ ಗೌರಮ್ಮ ಎಂಬವರು ಸಾವನ್ನಪ್ಪಿದ್ದಾರೆ.
ಇವೆರಲ್ಲರೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ. ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಜರುಗಿದೆ. ಟ್ರಾಕ್ಟರ್ಗೆ ಹಿಂದಿನಿAದ ಬಂದ ಟ್ಯಾಂಕರ್ ಲಾರಿ ಗುದ್ದಿದ ಪರಿಣಾಮ ನಿಯಂತ್ರಣ ತಪ್ಪಿದ ಎರಡೂ ವಾಹನಗಳು ಸೇತುವೆಯಿಂದ ಕೆಳಕ್ಕೆ ಉರುಳಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಹೊಸಪೇಟೆ ಹಾಗೂ ಕೊಪ್ಪಳದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಘಟನಾ ಸ್ಥಳ ಹಾಗೂ ಹೊಸಪೇಟೆ ಆಸ್ಪತ್ರೆ ಶವಾಗಾರಕ್ಕೆ ವಿಜಯನಗರ ಜಿಲ್ಲಾ ಪೊಲೀಸ್? ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆ.ಪಿ.ಮುರುಳಿಧರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರು ಹಾಗೂ ಜನರು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು.
ಐಜಿಪಿ ಮಾಹಿತಿ: ಟ್ರಾ÷್ಯಕ್ಟರ್ನಲ್ಲಿ 19 ಜನರು ಕೊಪ್ಪಳದ ಹುಲಿಗೆಮ್ಮನ ದರ್ಶನಕ್ಕೆ ಹೊರಟಿದ್ದರು. ಹೊಸಪೇಟೆ-ಮುನಿರಾಬಾದ್ ಗಡಿ ಬಳಿ ತೆರಳುತ್ತಿದ್ದಾಗ ಟ್ಯಾಂಕರ್ ಲಾರಿಯು ಹಿಂಬದಿಯಿ0ದ ಡಿಕ್ಕಿಯಾದ ಪರಿಣಾಮ ಟ್ರಾ÷್ಯಕ್ಟರ್, ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆ ಮೇಲಿಂದ ಬಿದ್ದಿದೆ. 6 ಜನ ಮೃತಪಟ್ಟಿದ್ದು, ಗಾಯಗೊಂಡ 9 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ ರವಾನಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ನಾಲ್ವರಿಗೆ ಹೊಸಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಟ್ಯಾಂಕರ್ ಚಾಲಕನ್ನು ವಶಕ್ಕೆ ಪಡೆಯಲಾಗಿದೆ ಎಂದು ಐಜಿಪಿ ಡಾ.ಹರ್ಷ ಮಾಹಿತಿ ನೀಡಿದರು.
5 ಲಕ್ಷ ರೂ. ಪರಿಹಾರ: ಇದೊಂದು ದುರದೃಷ್ಟಕರ ಘಟನೆಯಾಗಿದೆ. ಸಂಸದ ತುಕಾರಾಂ ಅವರು ಸ್ಥಳಕ್ಕೆ ಭೇಟಿ ನೀಡಿ, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದಾರೆ. ಮುಖ್ಯಮಂತ್ರಿಯವರು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಗಾಯಾಳುಗಳ ವೆಚ್ಚ ಭರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.








