ಜೂನ್ 1 ರಿಂದ  ಶಾಲೆಗಳು ಆರಂಭ

ಬೆಂಗಳೂರು : ಇಂದಿನಿ0ದ ಶಾಲೆಗಳ ಪುನಾರಂಭದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಆಯೋಗ ನಿಯೋಜಿಸಲಾಗಿದ್ದ ರಾಜ್ಯಮಟ್ಟದ ಶಾಲಾ ಆರಂಭೋತ್ಸವ ಕಾರ್ಯಕ್ರಮ ರದ್ದಾಗಿದ್ದು, ಆಯಾ ಶಾಲಾ ಮಟ್ಟದಲ್ಲೆ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಲಿದೆ.

ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಕಾರ್ಯಕ್ರಮ ರದ್ದುಗೊಂಡಿದ್ದು, ಎಲ್ಲಾ ಶಾಲೆಗಳಲ್ಲಿ ಪೋಷಕರ ಸಭೆ ನಡೆಸಲು ಸೂಚಿಸಲಾಗಿದೆ. ಇಂದಿನಿ0ದ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ. ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಸರ್ಕಾರಿ ಶಾಲೆಗಳಲ್ಲಿ ಭರದ ಸಿದ್ಧತೆಗಳು ಆರಂಭವಾಗಿವೆ.
ಚಿಣ್ಣರು ಎರಡು ತಿಂಗಳ ಕಾಲ ಬೇಸಿಗೆ ರಜೆಯಲ್ಲಿ ಮೋಜು, ಮಸ್ತಿ ಮಾಡಿ, ಕಾಲ ಕಳೆದರು. ಈಗ ನಾಳೆಯಿಂದ ಶಾಲೆಯತ್ತ ಮುಖ ಮಾಡಬೇಕಾಗಿದೆ. ಒಲ್ಲದ ಮನಸ್ಸಿನಿಂದಲೇ ಮಕ್ಕಳು ಶಾಲೆಗೆ ತೆರಳಲು ಸಜ್ಜಾಗಿದ್ದಾರೆ.
ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಮುಗಿದಿದ್ದು, ಜೂನ್ 1 ರಿಂದ 2026-27ನೇ ಶೈಕ್ಷಣಿಕ ಸಾಲಿನ ತರಗತಿಗಳು ಮರುಪ್ರಾರಂಭವಾಗುತ್ತಿವೆ. ಈ ಶೈಕ್ಷಣಿಕ ವರ್ಷದ ಮೊದಲ ದಿನದಂದು ಶಾಲೆಗಳಲ್ಲಿ ತಳಿರು-ತೋರಣದಿಂದ ಸಿಂಗಾರ ಮಾಡಿ ವಿದ್ಯಾರ್ಥಿಗಳನ್ನು ಹಬ್ಬದ ಸಡಗರದ ವಾತಾವರಣದಲ್ಲಿ ಮಕ್ಕಳನ್ನು ಸ್ವಾಗತಿಸಲು ತಯಾರಿ ನಡೆಸಿವೆ. ಮಧ್ಯಾಹ್ನದ ಬಿಸಿಯೂಟಕ್ಕೆ ಸಿಹಿ ಮಾಡಲು ಶಿಕ್ಷಣ ಇಲಾಖೆ ಶಾಲೆಗಳಿಗೆ ಸೂಚನೆ ನೀಡಿದೆ.

Recent Articles

spot_img

Related Stories

Share via
Copy link