ದೆಹಲಿಯಲ್ಲಿ ಸಂಪುಟ ಕಸರತ್ತು :ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನಕ್ಕೆ ಜಟಾಪಟಿ

ಬೆಂಗಳೂರು : ಸಚಿವ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನ ಕುರಿತಂತೆ ವರಿಷ್ಠರ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು.

ಜೂ. 3 ರಂದು ನಡೆಯುವ ನೂತನ ಮುಖ್ಯಮಂತ್ರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ 8-10 ಸಚಿವರನ್ನು ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಯಾರನ್ನೆಲ್ಲಾ ಸಚಿವರನ್ನಾಗಿಸಬೇಕು ಎಂಬ ಬಗ್ಗೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಪಟ್ಟಿಯನ್ನು ಅಂತಿಮಗೊಳಿಸಲಿದೆ. ದೆಹಲಿಗೆ ತೆರಳಿರುವ ಡಿ.ಕೆ. ಶಿವಕುಮಾರ್ ಹಾಗೂಸಿದ್ದರಾಮಯ್ಯ ಇಬ್ಬರೂ ತಮ್ಮ ಕಡೆಯಿಂದ ಯಾರನ್ನು ಸಚಿವರನ್ನಾಗಿಸಬೇಕು ಎಂಬ ಹೆಸರುಗಳ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಲಿದ್ದಾರೆ. ಹೈಕಮಾಂಡ್ ಎಲ್ಲವನ್ನು ಅಳೆದು ತೂಗಿ ಸಚಿವ ಪಟ್ಟಿಯನ್ನು ಅಂತಿಮಗೊಳಿಸಲಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿ. ಕೆ. ಶಿವಕುಮಾರ್ ಅವರು, ಜೂನ್ 3 ರಂದು ಸಂಜೆ 4:05ಕ್ಕೆ ಲೋಕ ಭವನದ ಆವರಣದಲ್ಲಿ ಕೆಲವು ಸಚಿವರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ಶನಿವಾರ ಕರ್ನಾಟಕದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾದರು. ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಮತ್ತು ಸೀಮಿತ ಸಂಖ್ಯೆಯ ಸಚಿವ ಸ್ಥಾನಗಳು ಕೈಯಲ್ಲಿರುವುದರಿಂದ, ಶಿವಕುಮಾರ್ ಅವರಿಗೆ ಇಕ್ಕಟ್ಟಿಗೆ ಸಿಲುಕಿದ್ದಾರೆ. ಏಕೆಂದರೆ, ಅವರು ಹೊರಗುಳಿದವರಿಂದ ದೊಡ್ಡ ಪ್ರಮಾಣದ ಅಸಮಾಧಾನಕ್ಕೆ ಒಳಗಾಗುವ ಅಪಾಯವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಮ್ಮೊಂದಿಗೆ ಪ್ರಮಾಣ ವಚನ ಸ್ವೀಕರಿಸುವ ಸಚಿವರ ಸಂಖ್ಯೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, “ಅದರ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದನ್ನು ಮಾಡಲಾಗುತ್ತದೆ. ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದು ಭಾನುವಾರ ತಿಳಿಸಿದ್ದರು.

ಹೊಸ ಸಚಿವ ಸಂಪುಟ ರಚನೆಗೆ ಸಂಬAಧಿಸಿದAತೆ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದರು.

ಏತನ್ಮಧ್ಯೆ, ಸಚಿವ ಸ್ಥಾನದ ಆಕಾಂಕ್ಷಿಗಳಿAದ ಲಾಬಿ ತೀವ್ರಗೊಂಡಿದ್ದು, ಅವರಲ್ಲಿ ಹಲವರು ಹೈಕಮಾಂಡ್ ಮುಂದೆ ತಮ್ಮ ಬೇಡಿಕೆ ಮಂಡಿಸಲು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಹಲವಾರು ಮಾಜಿ ಸಚಿವರು ಮತ್ತು ಶಾಸಕರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ವಿಸರ್ಜಿಸಲಾದ ಸಚಿವ ಸಂಪುಟದ ಕೆಲವು ಸಚಿವರು ಹೊಸ ಸಂಪುಟದಲ್ಲಿ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಈ ಬಾರಿ ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿರುವ ಶಾಸಕರು ಕೂಡ ರಾಷ್ಟç ರಾಜಧಾನಿಯನ್ನು ತಲುಪಿದ್ದಾರೆ.

ಮೂಲಗಳ ಪ್ರಕಾರ, ಹೊಸ ಸಚಿವ ಸಂಪುಟದಲ್ಲಿ ಹಳೆಯ ಮತ್ತು ಹೊಸ ಸದಸ್ಯರು ಇಬ್ಬರೂ ಇರುವ ಸೂಚನೆಗಳಿವೆ. ಜಾತಿ ಸಮೀಕರಣಗಳು, ಪ್ರದೇಶಗಳು ಮತ್ತು ಸಿದ್ದರಾಮಯ್ಯ ನಿಷ್ಠರನ್ನು ಗಮನದಲ್ಲಿಟ್ಟುಕೊಂಡು ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳುವ ಮೂಲಕ ಸಂಪುಟದಲ್ಲಿ ಸಮತೋಲನವನ್ನು ಸಾಧಿಸಲು ಪ್ರಯತ್ನಿಸಲಾಗುತ್ತದೆ ಎಂಬುದು ತಿಳಿದುಬಂದಿದೆ.

ಸಿದ್ದರಾಮಯ್ಯ ಸಂಪುಟದಿAದ ಹಲವು ಉಪಮುಖ್ಯಮಂತ್ರಿಗಳು ಆಯ್ಕೆಯಾಗಬಹುದು ಮತ್ತು ಕೆಲವು ಸಚಿವರನ್ನು ಉಳಿಸಿಕೊಳ್ಳಲಾಗುವುದಿಲ್ಲ ಎಂಬ ಊಹಾಪೋಹಗಳು ಹರಡಿವೆ. ಅದಾಗ್ಯೂ, ಪಕ್ಷದ ಮೂಲಗಳ ಪ್ರಕಾರ, ಸಂಪುಟ ರಚನೆ ಕುರಿತು ಪಕ್ಷದ ನಾಯಕತ್ವದೊಂದಿಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ.

ಇನ್ನು ಶಿವಕುಮಾರ್ ಅವರು ಪ್ರಸ್ತುತ ಹೊಂದಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ಬಗ್ಗೆಯೂ ಮಾತುಕತೆಗಳು ನಡೆಯುತ್ತಿವೆ. ಹಿರಿಯ ಶಾಸಕ ಮತ್ತು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಜೊತೆಗೆ ಕ್ಯಾಬಿನೆಟ್ ಸ್ಥಾನವನ್ನೂ ಬಯಸುತ್ತಿದ್ದಾರೆ ಎಂದು ವರದಿಯಾಗಿದೆ.

ನಿಯೋಜಿತ ಸಿಎಂ ನಿವಾಸದೆದರು ಅಭಿಮಾನಿಗಳ ದಂಡು: ಇಂದು ಬೆಳಗ್ಗೆ ಡಿಕೆಶಿ ನಿವಾಸದೆದರು ಅಭಿಮಾನಿಗಳ ದಂಡೇ ನೆರದಿತ್ತು. ತಮ್ಮ ನಿವಾಸದ ಬಾಲ್ಕನಿಯಲ್ಲಿ ಅಭಿಮಾನಿಗಳು, ಹಿತೈಸಿಗಳತ್ತ ಕೈ ಬೀಸಿದರು. ಬೆಂಬಲಿಗರು ಡಿ ಕೆ ಶಿವಕುಮಾರ್? ಅವರನ್ನು ಭೇಟಿ ಮಾಡಲು ಅವರ ನಿವಾಸದೆದರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು.

ಉಪಮುಖ್ಯಮಂತ್ರಿ ಹುದ್ದೆಗೆ ಪಟ್ಟು

ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಪ್ರಸ್ತಾವನ್ನು ಬಹುತೇಕ ಕೈಬಿಡುವ ನಿರ್ಧಾರಕ್ಕ ಬಂದಿದ್ದರೂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಪಟ್ಟು ಹಿಡಿಯುವ ಸಾಧ್ಯತೆಗಳಿವೆ. ಜತೆಗೆ ಮೊದಲ ಹಂತದ ಸಂಪುಟ ರಚನೆಯಲ್ಲಿ ತಮ್ಮ ಬೆಂಬಲಿಗರಿಗೆ ಹೆಚ್ಚಿನ ಸ್ಥಾನ ನೀಡುವಂತೆಯೂ ಅವರು ಹೈಕಮಾಂಡ್ ಮುಂದೆ ಬೇಡಿಕೆ ಇಡಲಿದ್ದಾರೆ. ದೆಹಲಿಗೆ ತೆರಳಿರುವ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಮೊದಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಇವರುಗಳೊಂದಿಗೆ ಚರ್ಚಿಸಿ ಮೊದಲ ಹಂತದಲ್ಲಿ ಯಾರನ್ನೆಲ್ಲಾ ಸಚಿವರನ್ನಾಗಿಸಬೇಕು ಎಂಬ ಬಗ್ಗೆ ಪಟ್ಟಿಯನ್ನು ಅಂತಿಮಗೊಳಿಸಿಕೊAಡು ನಂತರ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಅವರ ಒಪ್ಪಿಗೆ ಪಡೆದು ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡುವರು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

Recent Articles

spot_img

Related Stories

Share via
Copy link