ರಾಜ್ಯಸಭೆ ಚುನಾವಣೆ: ರಾಹುಲ್ ಸಮ್ಮುಖದಲ್ಲಿ ಖರ್ಗೆ ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆ: ರಾಹುಲ್ ಸಮ್ಮುಖದಲ್ಲಿ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ಹಾಗು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿ ಚುನಾಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಅವರು ನಾನು ಇವತ್ತು ನಾಮಿನೇಷನ್ ಫೈಲ್ ಮಾಡಿದ್ದೇನೆ. ಎಲ್ಲ ಶಾಸಕರು ನನಗೆ ಮತ ನೀಡುತ್ತಾರೆ. ಜೂನ್ 18ಕ್ಕೆ ಚುನಾವಣೆ ನಡೆಯಲಿದೆ” ಎಂದು ಹೇಳಿದರು.

ರಾಜ್ಯದಿಂದ ನಾಲ್ಕು ರಾಜ್ಯಸಭೆ ಸ್ಥಾನಗಳು ತೆರವಾಗಲಿವೆ. ಆ ಪೈಕಿ ಕಾಂಗ್ರೆಸ್ ಪಕ್ಷದ ಸಂಖ್ಯಾ ಬಲದಂತೆ 3 ಸ್ಥಾನ ಲಭಿಸಲಿದ್ದು, ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ. ರಾಜ್ಯದಿಂದ ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಉಸ್ತುವಾರಿ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೂನ್ 18ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಜೂನ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ವೇಳೆ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪಕ್ಷದ ಹಿರಿಯ ಮುಖಂಡ ಜಯರಾಂ ರಮೇಶ್ ಸೇರಿದಂತೆ ರಾಜ್ಯದ ಸಚಿವರು ಉಪಸ್ಥಿತರಿದ್ದರು.

ವಿಧಾನಸಭೆ ಸಭಾಂಗಣ ವೀಕ್ಷಿಸಿದ ರಾಹುಲ್ ಗಾಂಧಿ:
ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿಧಾನಸಭೆ ಸಭಾಂಗಣವನ್ನು ವೀಕ್ಷಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಯು.ಟಿ.ಖಾದರ್ ಅವರು ಸಭಾಂಗಣವನ್ನು ತೋರಿಸಿದರು.

Recent Articles

spot_img

Related Stories

Share via
Copy link