
ಬೆಂಗಳೂರು / ಮೈಸೂರು: ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿAದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕöÈತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು? ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ನಾಡಹಬ್ಬ ದಸರಾ- 2026 ಆಚರಣೆ ಸಂಬAಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಬಾರಿಯ ದಸರಾ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 26ರಂದು ಬೆಳಗ್ಗೆ 10 ಗಂಟೆಗೆ ಗಜಪೂಜೆ ನಡೆಯಲಿದೆ. ದಸರಾ ಉದ್ಘಾಟನೆ ಅಕ್ಟೋಬರ್ 11ರಂದು ಬೆಳಗ್ಗೆ 11.50ಕ್ಕೆ ನಿಗದಿ ಮಾಡಲಾಗಿದೆ. ಜಂಬು ಸವಾರಿ, ನಂದಿ ಪೂಜೆ ಕಾರ್ಯಕ್ರಮವನ್ನು ಅಕ್ಟೋಬರ್ 21ರಂದು ಮಧ್ಯಾಹ್ನ 1.30ಕ್ಕೆ ನಡೆಸಲಾಗುವುದು. ಜಂಬುಸವಾರಿ ಪುಷ್ಪಾರ್ಚನೆಯನ್ನು ಅಂದೇ ಸಂಜೆ 4.10ಕ್ಕೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಏರ್ ಶೋ ನಡೆಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ
ಇಂದಿನ ಸಭೆಯಲ್ಲಿ ಅನೇಕ ಸಭೆಗಳು ಬಂದಿದೆ. ದಸರಾ ಆಯೋಜನೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕಾರ್ಯಕಾರಿ ಸಮಿತಿ ರಚನೆ ಮಾಡಲಿದ್ದೇನೆ. ಈ ಬಾರಿ ಏರ್ ಶೋ ನಡೆಸಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಬೇಕು ಎಂದು ಸಲಹೆ ಬಂದಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು. ದಸರಾ ಉದ್ಘಾಟನೆಯನ್ನು ಯಾರ ಕೈಯಿಂದ ಮಾಡಿಸಬೇಕು ಎಂಬ ತೀರ್ಮಾನವನ್ನು ಸಮಿತಿಯು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ. ನಾನು ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದೇನೆ? ಎಂದು ತಿಳಿಸಿದರು.
ಬರಗಾಲ ಕಾರಣಕ್ಕೆ ದಸರಾ ನಿಲ್ಲಿಸುವ, ಸರಳವಾಗಿ ಆಚರಿಸುವ ಪ್ರಶ್ನೆ ಇಲ್ಲ
ಐತಿಹಾಸಿಕ ಮೈಸೂರು ದಸರಾ ಪಾರಂಪರಿಕ ಉತ್ಸವವಾಗಿದ್ದು, ನಮ್ಮ ರಾಜ್ಯದ ಹೆಮ್ಮೆ. ಪ್ರತಿ ವರ್ಷ ಉತ್ಸವದ ಸ್ವರೂಪ ಬದಲಾಗುತ್ತಿದೆ. ಹೊಸ ಹೊಸ ಆಲೋಚನೆ, ಆವಿಷ್ಕಾರಗಳೊಂದಿಗೆ ಕಾರ್ಯಕ್ರಮ ಅಳವಡಿಸಲು ಬೇಡಿಕೆ ಬರುತ್ತಿದೆ. ಅಂತಾರಾಷ್ಟಿçÃಯ ಖ್ಯಾತಿಗೆ ತಕ್ಕ ಹಾಗೆ ನಮ್ಮ ಸಂಸ್ಕöÈತಿಗೆ ಅನುಗುಣವಾಗಿ ಕಾರ್ಯಕ್ರಮ ಮಾಡಲಾಗುವುದು. ಬರಗಾಲ ಎಂಬ ಕಾರಣಕ್ಕೆ ಸ್ವಲ್ಪ ಹಣ ಉಳಿಸಲು ಹೋಗಿ ನಮ್ಮ ಸಂಸ್ಕöÈತಿ ಪರಂಪರೆಯ ವೈಭವವನ್ನು ಕಡಿಮೆ ಮಾಡುವುದು ಬೇಡ. ಬರಗಾಲ ಕಾರಣದಿಂದ ದಸರಾ ನಿಲ್ಲಿಸೋ, ಸರಳವಾಗಿ ಆಚರಣೆ ಮಾಡೋ ಪ್ರಶ್ನೆಯೇ ಇಲ್ಲ ಎದು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ನಮ್ಮ ಸರ್ಕಾರ ಚೆಸ್ಕಾಂ ಮೂಲಕ ಮೈಸೂರು ನಗರದಲ್ಲಿ ದೀಪಾಲಂಕಾರ ಮಾಡಿ ವೈಭವಯುತವಾಗಿ ಆಚರಣೆ ಮಾಡುತ್ತಿದ್ದೇವೆ. ಶಕ್ತಿ ಯೋಜನೆ ನಿಮಿತ್ತ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದೆ. ಶಕ್ತಿ ಯೋಜನೆಯಿಂದಾಗಿ ಕಳೆದ ಎರಡು ಮೂರು ವರ್ಷಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಷ್ಟçಮಟ್ಟದ ಗಾಯಕರನ್ನು ಕರೆಸಿ ಕಾರ್ಯಕ್ರಮ ಮಾಡಲಾಗಿದೆ. ಈ ಬಾರಿಯ ಆಚರಣೆಗೆ ಸಂಬAಧಿಸಿದAತೆ ಮೈಸೂರಿನ ಶಾಸಕರಾದ ತನ್ವೀರ್ ಸೇಠ್, ಶ್ರೀವತ್ಸ, ಹರೀಶ್ ಗೌಡರು, ಜಿ.ಟಿ ದೇವೇಗೌಡರು, ಮಹದೇವಪ್ಪ ಅವರು ಸಹಕಾರ ನೀಡಿದ್ದಾರೆ. ಸಂಸತ್ ಸದಸ್ಯರು ಅನೇಕ ಸಲಹೆ ನೀಡಿದ್ದಾರೆ? ಎಂದು ತಿಳಿಸಿದರು.
ಸಮಿತಿ ಹೆಸರಿನಲ್ಲಿ ರಾಜಕಾರಣ ಬಿಡಬೇಕು
ಸಮಿತಿ ರಚನೆ ಹೆಸರಿನಲ್ಲಿ ರಾಜಕಾರಣ ಮಾಡೋದು ಬಿಡಬೇಕು. ಇದರಲ್ಲಿ ನಾವು ರಾಜಕಾರಣ ಮಾಡುವುದಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದೇವೆ. 8 ವರ್ಷಗಳ ಕಾಲ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಈ ಹಬ್ಬವನ್ನು ಉತ್ತಮವಾಗಿ ನಡೆಸಿಕೊಂಡು ಬಂದಿದ್ರು. ನಾವು ಅದನ್ನು ಇನ್ನಷ್ಟು ಉತ್ತಮವಾಗಿ ಮುಂದುವರೆಸಿಕೊAಡು ಹೋಗೋಣ ಎಂದು ನಮ್ಮ ಸಹೋದ್ಯೋಗಿಗಳಾದ ಪರಮೇಶ್ವರ್, ಜಾರ್ಜ್, ಯತೀಂದ್ರ ಅವರು ಸಲಹೆ ನೀಡುತ್ತಿದ್ದಾರೆ. ಈ ಬಾರಿಯೂ ದಸರಾವನ್ನು ವಿಜೃಂಭಣೆಯಿAದ ಆಚರಿಸಲಾಗುವುದು. ವಿಜೃಂಭಣೆ ಎಂದರೆ ಕೇವಲ ಹಣ ವೆಚ್ಚ ಮಾಡುವುದಷ್ಟೇ ಅಲ್ಲ. ಹೊಸ ಚಿಂತನೆಗಳನ್ನು ಗಮನದಲ್ಲಿಟ್ಟುಕೊಂಡು ನಮ್ಮ ಪರಂಪರೆಯನ್ನು ಉಳಿಸಿಕೊಂಡು ಹೋಗುವುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಚಿವರಾದ ಕೆ.ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಸಂಸದರಾದ ಯದುವೀರ್ ಒಡೆಯರ್, ಮಾಜಿ ಸಚಿವರಾದ ಜಿ.ಟಿ ದೇವೇಗೌಡ, ಶಾಸಕರಾದ ತನ್ವೀರ್ ಸೇಠ್, ದರ್ಶನ್ ದ್ರುವನಾರಾಯಣ, ಡಾ. ತಿಮ್ಮಯ್ಯ, ಅನಿಲ್ ಚಿಕ್ಕಮಾದು, ರಮೇಶ್ ಬಂಡಿಸಿದ್ದೇಗೌಡ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಕಲ ಸಿದ್ಧತೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಿದ್ದತೆ ಆರಂಭಿಸಿದ್ದು ಈ ನಡುವೆ ಅಕ್ಟೋಬರ್ 11 ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಉದ್ಘಾಟನೆ, ಜಂಬೂಸವಾರಿ ಮೆರವಣಿಗೆ ದಿನಾಂಕ ಸಮಯ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಅ. 11ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂದು ಬೆಳಿಗ್ಗೆ 11.50ಕ್ಕೆ ಶುಭ ಧನುರ್ ಲಗ್ನದಲ್ಲಿ ದಸರಾಗೆ ಚಾಲನೆ ದೊರೆಯಲಿದೆ. ಅ. 21 ರಂದು ಮೈಸೂರು ದಸರಾ ಪ್ರಮುಖ ಆಕರ್ಷಣೆ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು ಅಂದು ಸಂಜೆ 4.10ರಿಂದ 4.35ರ ನಡುವೆ ತಾಯಿ ಚಾಮುಂಡೇಶ್ವರಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಸಿಗಲಿದೆ.








