ಅಕ್ಟೋಬರ್ ಅಂತ್ಯದೊಳಗೆ ಸ್ಥಳೀಯ ಚುನಾವಣೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯ್ತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿಗಳಿಗೆ ಚುನಾವಣೆ ಸನ್ನಿಹಿತವಾಗಿದ್ದು, ಅಕ್ಟೋಬರ್ ಅಂತ್ಯದೊಳಗೆ ಚುನಾವಣೆಗಳು ನಡೆಯಲಿವೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು, ಅಕ್ಟೋಬರ್ ಅಂತ್ಯದೊಳಗೆ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಗಳು ನಡೆಯಲಿವೆ ಎಂದರು
ಗ್ರಾಮ ಹಾಗೂ ಜಿಲ್ಲಾ ಪಂಚಾಯ್ತಿಗಳ ಅಧಿಕಾರಾವಧಿ ಈಗಾಗಲೇ ಮುಗಿದಿದೆ. ಆಡಳಿತಾಧಿಕಾರಿಗಳಿಂದ ಸ್ಥಳೀಯ ಸಂಸ್ಥೆಗಳ ಆಡಳಿತ ನಡೆಯುತ್ತಿದೆ. ಇಲ್ಲಿ ಜನಾಡಳಿತ ಆರಂಭವಾಗಬೇಕು ಈ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಅಕ್ಟೋಬರ್ ಒಳಗೆ ಗ್ರಾಮ ಹಾಗೂ ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗಳು ನಡೆಯಲಿವೆ ಎಂದರು.

ಅಕ್ಟೋಬರ್ ಅಂತ್ಯದೊಳಗೆ ಚುನಾವಣೆಗಳನ್ನು ನಡೆಸುವ ನಿಟ್ಟಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಜತೆ ಮೀಸಲಾತಿ ಪ್ರಕ್ರಿಯೆಗಳು ಆರಂಭವಾಗಿವೆ. ಅಕ್ಟೋಬರ್ ಅಂತ್ಯದೊಳಗೆ ಚುನಾವಣೆ ನಡೆಸುತ್ತೇವೆ ಎಂದರು

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿಗಾಗಿ 1 ಕೋಟಿ ರೂ. ಅನುದಾನ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಎಲ್ಲೂ ಆಗದಂತೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.
ಹೆಚ್‌ಎಂಟಿ ಭೂಮಿ, ಅರಣ್ಯ ಭೂಮಿ 1889 ರಲ್ಲೆ ಅರಣ್ಯ ಭೂಮಿ ಎಂದು ನಿಗದಿಪಡಿಸಲಾಗಿದೆ. ಮೈಸೂರು ಗೆಜೆಟ್‌ನಲ್ಲಿ ಈ ಬಗ್ಗೆ ಅಧಿಸೂಚನೆ ಆಗಿದೆ. ಹೀಗಾಗಿ ಹೆಚ್‌ಎಂಟಿ ಭೂಮಿ ಈಗಲೂ ಅರಣ್ಯ ಭೂಮಿಯೇ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರ ಮೇಲೆ ನನಗೆ ವೈಯುಕ್ತಿಕ ದ್ವೇಷ ಏನೂ ಇಲ್ಲ. ನಾನು ಇಲ್ಲಿವರೆಗೆ ಯಾವುದೇ ಹಿತಾಸಕ್ತಿ ರಾಜಕೀಯ ಮಾಡಿಲ್ಲ. ಕುಮಾರಸ್ವಾಮಿ ಅವರು ನನ್ನ ಮೇಲೆ ಆರೋಪ ಮಾಡಿದ್ದಾರೆ. ನಾನು ಸ್ಪಷ್ಟೀಕರಣ ಕೊಟ್ಟಿದ್ದೇನೆ. ಹೆಚ್‌ಎಂಟಿ ಜಾಗದ ಬಳಕೆ ಮತ್ತು ಮಾರಾಟಕ್ಕೆ ಸಚಿವ ಸಂಪುಟದ ಒಪ್ಪಿಗೆ ಇರಲಿಲ್ಲ. ಈ ಹಿಂದಿನ ಅರಣ್ಯ ಸಚಿವರ ಅನುಮೋದನೆಯೂ ಇರಲಿಲ್ಲ. ಹಾಗಾಗಿ ನಾನು ಅರಣ್ಯ ಭೂಮಿಯನ್ನು ಹಿಂಪಡೆಯಲು ಸೂಚಿಸಿದ್ದೆ. ಕೋರ್ಟ್ನಲ್ಲಿ ಈಗ ವ್ಯಾಜ್ಯ ನಡೆಯುತ್ತಿದೆ ಎಂದರು.
ಕೇAದ್ರ ಸಚಿವ ಕುಮಾರಸ್ವಾಮಿ ಅವರು ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ನಾನು ಅವರಂತೆ ಮಾತನಾಡಲು ಹೋಗಲ್ಲ. ಹೆಚ್‌ಎಂಟಿ ಭೂಮಿ ಕರ್ನಾಟಕ ಜನರ ಸ್ವತ್ತು. ಆದರೆ ಈ ಬಗ್ಗೆ ಕುಮಾರಸ್ವಾಮಿ ಅವರು ದಾಖಲೆ ಇಲ್ಲದೆ ಮಾತನಾಡುವುದು ಸರಿ ಅಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.

ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿ :

ರಾಜ್ಯದಲ್ಲಿ ವಿಬಿ ಜಿ ರಾಮ್ ಜಿ ಕಾಯ್ದೆ ಯೋಜನೆಯನ್ನು ಜಾರಿ ಮಾಡಿದ್ದೇವೆ. ಹೊಸದಾಗಿ 27 ಕಾಮಗಾರಿಗಳನ್ನು ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರದಿAದ 1700 ಕೋಟಿ ರೂ. ಬಂದಿದೆ. ಉಳಿದಕ್ಕೆಲ್ಲಾ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಬರದ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದೆ. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯುವ, ಹೊಸ ಬೋರ್‌ವೆಲ್ ಕೊರೆಸುವ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ 117 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಎಂದರು.

Recent Articles

spot_img

Related Stories

Share via
Copy link