ಮುಂಬೈ :
ಗನ್ ಮಿಸ್ ಫೈರ್ ಆದ ಕಾರಣ ಬಾಲಿವುಡ್ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ತನ್ನದೇ ಗನ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ.ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಗೋವಿಂದ ಅವರ ಬಳಿಯಿದ್ದ ಗನ್‌ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ನಟ ಗೋವಿಂದ ಹಾಗೂ ಕುಟುಂಬಸ್ಥರು ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.