ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ – ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ

ಬೆಂಗಳೂರು:

ಸಿಲಿಕಾನ್ ಸಿಟಿಯ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಶಾಲೆಗಳಲ್ಲಿ ಈಗ ಆತಂಕ, ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಮಾಹಿತಿ ನೀಡಿರುವಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಹುಸ್ಕೂರಿನ ಎಬಿನೈಜರ್ ಇಂಟರ್ ನ್ಯಾಷನರ್ ಸ್ಕೂಲ್, ವಿನ್ಸೆಂಟ್ ಪಲ್ಲೋಟಿ ಶಾಲೆ ಸೇರಿದಂತೆ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರೋದಾಗಿ ತಿಳಿಸಿದ್ದಾರೆ.

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು, ಸ್ಥಳೀಯ ಭಾಷೆಗಳಲ್ಲ; ಭಾಷೆ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ವಿಷಯ ತಿಳಿಯುತ್ತಿದ್ದಂತ ಶಾಲೆಗಳಿಗೆ ಬಾಂಬ್ ಸ್ಕ್ವಾಡ್, ಶ್ವಾನದಳದ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವುದೇ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪೋಷಕರು ಆತಂಕ ಪಡದಂತೆ ಮನವಿ ಮಾಡಿದ್ದಾರೆ.

ಅನಾಮಕ ಕಳುಹಿಸಿರುವಂತ ಬಾಂಬ್ ಬೆದರಿಕೆ ಇ-ಮೇಲ್ ನಲ್ಲಿ ನಿಮ್ಮ ಶಾಲೆಗಳಲ್ಲಿ ಶಕ್ತಿಶಾಲಿ ಇಟ್ಟಿದ್ದೀವಿ. ಇದು ತಮಾಷೆಯಲ್ಲ, ನೂರಾರು ಜನರ ಹಾನಿಯಾಗಲಿದೆ. ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ. ಎಚ್ಚರಿಕೆ ವಹಿಸೋದು ನಿಮ್ಮ ಕೈಯಲ್ಲಿ ಇದೆ ಎಂಬುದಾಗಿ ತಿಳಿಸಲಾಗಿದೆ.

ಕುಣಿಗಲ್: 161 ಅಡಿ ಆಂಜನೇಯ ವಿಗ್ರಹ ಏ 10 ರಂದು ಪ್ರಧಾನಿಯಿಂದ ಲೋಕಾರ್ಪಣೆ

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link