ನವದೆಹಲಿ:
ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ,ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್ ಸೇರಿದಂತೆ ದೆಹಲಿಯ 40 ಕ್ಕೂ ಹೆಚ್ಚು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ.
ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್ ಸೇರಿದಂತೆ ದೆಹಲಿಯ 40 ಕ್ಕೂ ಹೆಚ್ಚು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಆವರಣದೊಳಗೆ ಗುಪ್ತ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಹೇಳುವ ಬೆದರಿಕೆ ಇಮೇಲ್‌ನಲ್ಲಿ ಶಾಲೆಗಳನ್ನು ಗುರಿಯಾಗಿಸಲಾಯಿತು.
ಕಟ್ಟಡದೊಳಗೆ ಅನೇಕ ಬಾಂಬ್‌ಗಳನ್ನು ಆಯಕಟ್ಟಿನ ರೀತಿಯಲ್ಲಿ ಇರಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಗಮನಾರ್ಹ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಇಮೇಲ್ ಪ್ರತಿಪಾದಿಸಿದೆ. ಅನಾಮಧೇಯ ಕಳುಹಿಸುವವರು 30,ಸಾವಿರ್ ಡಾಲರ್ ಹಣಕ್ಕೆ ಬೇಡಿಯಿಟ್ಟಿದ್ದಾರೆ ಎನ್ನಲಾಗಿದೆ, ಶಾಲಾ ಆಡಳಿತ ಮಂಡಳಿ ತಕ್ಷಣ ಕ್ರಮ ಕೈಗೊಂಡು ತರಗತಿಗಳಿಗೆ ಹಾಜರಾಗಲು ಬಂದ ವಿದ್ಯಾರ್ಥಿಗಳನ್ನು ಮನೆಗೆ ವಾಪಸ್ ಕಳುಹಿಸಿದೆ. ಮುಂಜಾಗ್ರತಾ ಕ್ರಮವಾಗಿ ತಮ್ಮ ಮಕ್ಕಳನ್ನು ಕರೆದುಕೊಂಡು ಬರುವಂತೆ ಪೋಷಕರಿಗೆ ತಿಳಿಸಲಾಗಿದೆ.